ದೀಪಾವಳಿ ಆಚರಿಸಿದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್

Public TV
1 Min Read

ವಾಷಿಂಗ್ಟನ್: ಅಮೆರಿಕದ (America) ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ (Kamala Harris) ಹಾಗೂ ಅವರ ಪತಿ ಡೌಗ್ ಎಂಹೊಫ್ ಅವರು ವಾಷಿಂಗ್ಟನ್‍ನ ತಮ್ಮ ನಿವಾಸದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು (Diwali) ಅದ್ಧೂರಿಯಾಗಿ ಆಚರಿಸಿದರು.

ಈ ಬಗ್ಗೆ ಕಮಲಾ ಹ್ಯಾರಿಸ್‌ ಅಭಿಮಾನಿ ಟ್ವಿಟ್ಟರ್‌ನಿಂದ ವೀಡಿಯೋವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಕಮಲಾ ಹ್ಯಾರಿಸ್ ಹಾಗೂ ಅವರ ಪತಿ ಸೇರಿ ಪಟಾಕಿಯನ್ನು ಹೊಡೆಯುವ ಮೂಲಕ ಸಂಭ್ರಮದಿಂದ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. ಈ ವೀಡಿಯೋದಲ್ಲಿ ಅವರ ಜೊತೆ ಇನ್ನೂ ಅನೇಕರು ದೀಪಾವಳಿಯನ್ನು ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: RSSನವರು ಹೆಚ್ಚು ಮಕ್ಕಳನ್ನು ಹುಟ್ಟಿಸಲಿ ನಾವು ಹುಟ್ಟಿಸಲ್ಲ: ಅಸಾದುದ್ದೀನ್ ಓವೈಸಿ

ಮೂಲಗಳ ಪ್ರಕಾರ ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಗಣ್ಯರು ದೀಪಾವಳಿಯನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ವರ್ಷದಿಂದ ನ್ಯೂಯಾರ್ಕ್ ನಗರದಲ್ಲಿ ದೀಪಾವಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸುವುದಾಗಿ ಈಗಾಗಲೇ ತಿಳಿಸಲಾಗಿದೆ. ಇದನ್ನೂ ಓದಿ: ಮುಂದಿನ ವರ್ಷದಿಂದ ದೀಪಾವಳಿಗೆ ನ್ಯೂಯಾರ್ಕ್‌ ನಗರದ ಶಾಲೆಗಳಿಗೆ ರಜೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *