ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

Public TV
1 Min Read

ಚಾಮರಾಜನಗರ: ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ, ಉಘೇ ಮಾದಪ್ಪ ಎನ್ನುವ ಜಯಕಾರ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರೆದ ಮಹಿಳೆಯರು, ಈ ಎಲ್ಲ ಸಂಭ್ರಮ ಮಲೆ ಮಹದೇಶ್ವರನ (Male Mahadeshwara) ದೀಪಾವಳಿ (Deepavali) ರಥೋತ್ಸವದಲ್ಲಿ ಕಂಡುಬಂದಿದೆ.

Mahadeshwara Hills

ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ (Mahadeshwara Hill) ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿಂದು ಮಾದಪ್ಪನ ದೀಪಾವಳಿ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು.  ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ

ಉಘೇ, ಉಘೇ, ಮಾದಪ್ಪ ಎನ್ನುತ್ತಾ, ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಾಜ್ಯದ ಮೂಲೆ, ಮೂಲೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

ಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೇ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *