ಗೆಳತಿ ಕೊಂದು, ಮೃತದೇಹವನ್ನು 4 ದಿನ ಮೆಡಿಕಲ್ ಸ್ಟೋರ್‌ನಲ್ಲೇ ಇಟ್ಕೊಂಡಿದ್ದ ಕಿಲ್ಲರ್

Public TV
2 Min Read

ರಾಯಪುರ: ದೆಹಲಿಯ ಶ್ರದ್ಧಾ ವಾಕರ್ (Shraddha Walker) ಹತ್ಯೆ ಮಾದರಿಯಲ್ಲೇ ಮತ್ತೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಗೆಳತಿಯನ್ನ ಕೊಂದು ನಾಲ್ಕು ದಿನಗಳ ಕಾಲ ಮೆಡಿಕಲ್ ಸ್ಟೋರ್‌ನಲ್ಲಿ (Medical Store) ಇಟ್ಟಿದ್ದ ಘಟನೆ ಛತ್ತೀಸಘಡದ (Chhattisgarh) ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮೆಡಿಕಲ್ ಸ್ಟೋರ್ ಮಾಲೀಕ ಆಶಿಶ್ ಸಾಹು ಹಣದ ಸಮಸ್ಯೆಯಿಂದ ತನ್ನ ಗೆಳತಿ ಪ್ರಿಯಾಂಕಾಳನ್ನು ಕೊಂದು ಶವವನ್ನು 4 ದಿನಗಳ ಕಾಲ ತನ್ನ ಅಂಗಡಿಯಲ್ಲಿಟ್ಟು ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ. ಮೃತದೇಹವನ್ನು ಬಟ್ಟೆಯೊಂದರಲ್ಲಿ ಸುತ್ತಿ ಕಾರಿನಲ್ಲಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತದಿಂದ ನಿಧನ

ಪೊಲೀಸರ ಪ್ರಕಾರ, ಸಾಹು ಮತ್ತು ಭಿಲಾಯಿ ನಿವಾಸಿ ಪ್ರಿಯಾಂಕಾ ನಡುವೆ ಹಣಕಾಸಿನ ವಿಚಾರವಾಗಿ ಕೆಲ ದಿನಗಳಿಂದ ಜಗಳ ನಡೆಯುತ್ತಿತ್ತು. ಕೊಲೆಗೆ ಇದೇ ಕಾರಣ ಇರಬಹುದು ಎಂದು ಹೇಳಿದ್ದಾರೆ.

ಪ್ರಿಯಾಂಕಾ ಬಿಲಾಸ್‌ಪುರದ ಹಾಸ್ಟೆಲ್‌ನಲ್ಲಿ ಕೆಪಿಎಸ್‌ಸಿ (KPSC) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಈ ವೇಳೆ ಆಶಿಶ್ ಸಾಹು ಜೊತೆಗೆ ಆತ್ಮೀಯತೆ ಬೆಳೆದಿದೆ. ನಂತರ ಇಬ್ಬರು ಒಟ್ಟಿಗೆ ಷೇರು ಮಾರುಕಟ್ಟೆಯಲ್ಲಿ (Share Market) ಹಣ ಹೂಡಿಕೆ ಮಾಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿನ ನಷ್ಟದ ನಂತರ ತನ್ನಿಂದ ಸಾಲ ಪಡೆದಿದ್ದ 11 ಲಕ್ಷ ರೂಪಾಯಿಯನ್ನು ಹಿಂದಿರುಗಿಸುವಂತೆ ಆಶಿಶ್‌ಗೆ ಒತ್ತಡ ಹೇರುತ್ತಿದ್ದಳು ಎಂದು ಬಿಲಾಸ್‌ಪುರದ ಎಸ್ಪಿ ಪಾರುಲ್ ಮಾಥುರ್ ತಿಳಿಸಿದ್ದಾರೆ. ಇದನ್ನೂ ಓದಿ: 3 ದಶಕಗಳ ಕಾಲ ನರ್ಮದಾ ಅಣೆಕಟ್ಟು ಯೋಜನೆ ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಯಾತ್ರೆ ಮಾಡ್ತಿದ್ದೀರಾ: ರಾಗಾ ವಿರುದ್ಧ ಮೋದಿ ಕಿಡಿ

ಕೆಲ ದಿನಗಳ ಹಿಂದೆ ಬಿಲಾಸ್‌ಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕಾ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು. ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಸಾಹುವನ್ನು ಪ್ರಮುಖ ಆರೋಪಿ ಎಂದು ಶಂಕಿಸಿದ್ದು, ಆತನ ಮೇಲೆ ಕಣ್ಣಿಟ್ಟಿತ್ತು. ಕುಟುಂಬದ ಸದಸ್ಯರೊಬ್ಬರು ಪ್ರಿಯಾಂಕಾ ಮತ್ತು ಸಾಹು ಇಬ್ಬರು ಪರಿಚಿತರು. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಬಹಿರಂಗಪಡಿಸಿದರು. ಆದ್ದರಿಂದ ಆರೋಪಿಯನ್ನು ಪ್ರಮುಖ ಶಂಕಿತನಾಗಿ ಗುರುತಿಸಲಾಗಿತ್ತು.

ಸಾಹು ಅಂಗಡಿ ಮತ್ತು ನಿವಾಸದ ಸುತ್ತಮುತ್ತಲಿನ ಸಿಸಿಟಿವಿಯ (CCTV) ದೃಶ್ಯಗಳ ಜೊತೆಗೆ ಅವನ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿತ್ತು. ನವೆಂಬರ್ 14ರಂದು ಪ್ರಿಯಾಂಕಾಳನ್ನು ಕೊಂದ ಸಾಹು ದೇಹವನ್ನು 4 ದಿನ ಮೆಡಿಕಲ್ ಶಾಪ್‌ನಲ್ಲಿ ಇಟ್ಟಿದ್ದು. ಶವ ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ. ಆತ ದೇಹವನ್ನು ಸಾಗಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಪ್ರದೀಪ್ ಆರ್ಯ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *