ನಾನು ಮದುವೆ ಆಗಲ್ಲ ಎಂದ ಮೋಹಕತಾರೆ ರಮ್ಯಾ

Public TV
1 Min Read

ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಆಗಿದ್ದಾರೆ. ಸಿನಿಮಾ ತಯಾರಿಯಲ್ಲಿ ಬ್ಯುಸಿಯಿರುವ ನಟಿ ಇದೀಗ ಸಮಾರಂಭವೊಂದರಲ್ಲಿ ತಮ್ಮ ಮದುವೆಯ ಬಗ್ಗೆ ರಮ್ಯಾ ಮೌನ ಮುರಿದಿದ್ದಾರೆ.

ಸಾಕಷ್ಟು ವರ್ಷಗಳ ನಂತರ ರಮ್ಯಾ ಮತ್ತೆ ಬಣ್ಣ ಹಚ್ತಿದ್ದಾರೆ. ಈ ಗುಡ್ ನ್ಯೂಸ್ ಮಧ್ಯೆ ತಮ್ಮ ಮದುವೆಯ ಬಗ್ಗೆ ಕೂಡ ನಟಿ ಮಾತನಾಡಿದ್ದಾರೆ. ಇತ್ತೀಚೆಗೆ ಬೆಂಗಳೂರು ಕಾಲೇಜುವೊಂದರಲ್ಲಿ ರಮ್ಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ನೆಚ್ಚಿನ ನಟಿ ರಮ್ಯಾಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳಿದ್ದಾರೆ.

ಮದುವೆ ಏನುಕೇ ಆಗಬೇಕು ಎಂಬುದು ಅರ್ಥವಾಗುತ್ತಿಲ್ಲ. ಅದೇ ನಾವು ಹೇಳುತ್ತಿರೋದು ಮದುವೆ ಆಗಬೇಡಿ. ಅದೇ ನಮಗೆ ಬೇಕಾಗಿರೋದು ಎಂದು ಸಭೆಯಲ್ಲಿದ್ದ ವಿದ್ಯಾರ್ಥಿ ಹೇಳಿದ್ದಾರೆ. ಮದುವೆ ಆಗಬಾರದು ಅಲ್ವಾ ಯೆಸ್ ಆಗಲ್ಲಾ ಎಂದಿದ್ದಾರೆ. ಹ್ಯಾಪಿಯಾಗಿರೋದು ಅಥವಾ ಮದುವೆ ಎರಡರಲ್ಲಿ ಒಂದನ್ನ ಚೂಸ್ ಮಾಡಬೇಕು. ಅದಕ್ಕೆ ನಾನು ಹ್ಯಾಪಿಯಾಗಿರೋದನ್ನ ಚ್ಯೂಸ್ ಮಾಡ್ತೀನಿ ಎಂದಿದ್ದಾರೆ. ನಾನು ಮದುವೆ ಆಗಲ್ಲಾ ಎಂದು ರಮ್ಯಾ ರಿಯಾಕ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಮದುವೆ ಸುಳ್ಳು ಸುಳ್ಳು: ಸುಮಲತಾ ಅಂಬರೀಶ್ ಸ್ಪಷ್ಟನೆ

ಒಳ್ಳೆಯ ಸೋಲ್‌ಮೇಟ್ ಸಿಕ್ಕಿದ್ರೆ ಮದುವೆ ಆಗಿ ಎಂದಿದ್ದಾರೆ. ನನಗೆ ಇನ್ನೂ ಸಿಕ್ಕಿಲ್ಲ, ಸಿಕ್ಕಿದ್ರೆ ಮದುವೆ ಆಗುತ್ತೀನಿ ಎಂದು ರಮ್ಯಾ ಮಾತನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article