ಡಿ.6 ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇವೆ – ಬೊಮ್ಮಾಯಿಗೆ ʼಮಹಾʼ ಸಚಿವರ ಸವಾಲು

Public TV
2 Min Read

ಬೆಳಗಾವಿ: ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) ಮತ್ತೆ ಉದ್ಧಟತನ ಪ್ರದರ್ಶನ ಮಾಡಿದ್ದು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ (Belagavi) ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ (Basvaraj Bommai) ಸವಾಲು ಹಾಕಿದ್ದಾರೆ.

ಕರ್ನಾಟಕಕ್ಕೆ (Karnataka) ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಚಂದ್ರಕಾಂತ್‌ ಪಾಟೀಲ್, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿಯ ಪತ್ರವಾಗಲಿ ತಲುಪಿಲ್ಲ. ನಾನು ಡಿಸೆಂಬರ್ 3 ರಂದು ಹೋಗಬೇಕಿತ್ತು. ಆದ್ರೆ ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನ ಇದೆ. ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ಹೀಗಾಗಿ ನಾನು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಚಿರತೆ ಭೀತಿ; ಒಂಟಿಯಾಗಿ ಹೊರಗಡೆ ಓಡಾಡಬೇಡಿ – ವನ್ಯಜೀವಿ ತಜ್ಞರ ಎಚ್ಚರಿಕೆ

ಇದಲ್ಲದೇ ಡಿ.6ರಂದು ಹಲವು ಕಾರ್ಯಕ್ರಮಗಳು ಸಹ ಇವೆ. ಗಡಿ ಭಾಗದ ಜನ, ಗಡಿ ಹೋರಾಟದಲ್ಲಿ ಮೃತಪಟ್ಟ ಹುತಾತ್ಮರ ನಿವಾಸಕ್ಕೆ ಭೇಟಿ ನೀಡುವುದಿದೆ. ಈ ಪೈಕಿ ಅಂಬೇಡ್ಕರ್ ಉದ್ಯಾನವನದಲ್ಲಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದೇನೆ. ಕರ್ನಾಟಕ ಸರ್ಕಾರಕ್ಕೆ ನಾನು ಹೇಳಬಯಸುತ್ತೇನೆ, ನಾವು ಯಾವುದೇ ಸಂಘರ್ಷ ಮಾಡಲು ಬರುತ್ತಿಲ್ಲ. 865 ಮರಾಠಿ ಭಾಷಿಕ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಏನು ಸೌಲಭ್ಯ ನೀಡಬಹುದು ಎಂಬ ಬಗ್ಗೆ ಚರ್ಚಿಸಲು ತೆರಳುತ್ತಿದ್ದೇನೆ. 865 ಹಳ್ಳಿಗಳು ಸಮಾಧಾನದಿಂದ ಇದ್ದಾರೆ ಎಂದರೆ ಅದರ ಲಾಭ ನಿಮಗೆ ಇದೆ. ಕರ್ನಾಟಕ ಸರ್ಕಾರದ ನಾಗರಿಕರಿಗೆ ನೀವು ಸೌಲಭ್ಯ ನೀಡಲೇಬೇಕಾಗುತ್ತದೆ. ಆದ್ರೆ 865 ಮರಾಠಿ ಭಾಷಿಕ ಜನರನ್ನು ಮಹಾರಾಷ್ಟ್ರದ ನಾಗರಿಕರೆಂದು ನಾವು ಸೌಲಭ್ಯ ನೀಡುತ್ತೇವೆ. ಯಾವುದೇ ನಿಷೇಧ ಹೇರಿದರೂ ನಾನು ನಿಲ್ಲುವ ಮನುಷ್ಯನಲ್ಲ. ನನಗೆ ನೀವು ಧಮ್ಕಿ ಹಾಕಬೇಡಿ. ನಾವು ಎಚ್ಚರಿಕೆ ನೀಡಲು ಹೋಗುತ್ತಿದ್ದೇವೆ ಎಂದು ಅವರಿಗೆ ಅನಿಸುತ್ತಿದೆ. ಆದ್ರೆ, ನಾವು ಸಮನ್ವಯದಿಂದ ಜನರ ಮನಸ್ಥಿತಿ ತಿಳಿದು ಅವರಿಗೆ ಮಹಾರಾಷ್ಟ್ರ ಸರ್ಕಾರದ ನಿಲುವು ತಿಳಿಸಲು ತೆರಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಲ್ಲ ಹಿಂದೂಗಳನ್ನ ಕೊಲ್ಲಬಹುದಿತ್ತು – ನಿವೃತ್ತ ಜಡ್ಜ್ ವಸಂತ ಮುಳಸಾವಳಗಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *