ಪಿಯು ವಿದ್ಯಾರ್ಥಿನಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿದ 17 ವರ್ಷದ ಹುಡುಗ!

Public TV
1 Min Read

ಚೆನ್ನೈ: ಪಾಲಿಟೆಕ್ನಿಕ್‌ನಲ್ಲಿ ಓದುತ್ತಿದ್ದ 17 ವರ್ಷದ ಹುಡುಗನೊಬ್ಬ (Minor Boy) ಪಿಯುಸಿ ಓದುತ್ತಿದ್ದ 16 ವರ್ಷದ ಅಪ್ರಾಪ್ತ ಬಾಲಕಿಗೆ (Minor Girl) ಬಸ್ ನಿಲ್ದಾಣದಲ್ಲಿಯೇ (Bus Stand) ತಾಳಿ ಕಟ್ಟಿರುವ ಘಟನೆ ತಮಿಳುನಾಡಿನ (Tamil Nadu) ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಡಲೂರು ಪೊಲೀಸರು ಹುಡುಗನನ್ನು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ಹುಡುಗ, ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಬಾಲಕಿಗೆ ನೋಡುಗರ ಸಮ್ಮುಖದಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತನಿಖೆ ಆರಂಭಿಸಿದೆ. ಕೊನೆಗೂ ಪೊಲೀಸರು ಮಂಗಳವಾರ ಅಪ್ರಾಪ್ತನನ್ನು ಬಂಧಿಸಿದ್ದಾರೆ.

STOP CHILD MARRIAGE

ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯ ಕಚೇರಿಯಲ್ಲಿ ಕೌನ್ಸೆಲಿಂಗ್ ನೀಡಲಾಗಿದ್ದು, ಹುಡುಗನನ್ನು ಕಡಲೂರಿನಲ್ಲಿರುವ ಬಾಲಾಪರಾಧಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ಇದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿ ಬಾಲಾಜಿ ಗಣೇಶ್‌ನನ್ನು ಬಂಧಿಸಿರುವುದಾಗಿ ಕಡಲೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್. ಎಸ್ ರಾಜೀನಾಮೆ

ಅಪ್ರಾಪ್ತರು ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಬಾಲಾಜಿ ವಿರುದ್ಧ ಬಾಲನ್ಯಾಯ ಕಾಯ್ದೆ, ಮಹಿಳಾ ಕಿರುಕುಳ ತಡೆ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *