ಅಪ್ರಾಪ್ತೆಯನ್ನು ವಿವಾಹವಾಗಿ ಗರ್ಭಿಣಿ ಮಾಡಿದ 17ರ ಹುಡುಗ ಅರೆಸ್ಟ್

Public TV
1 Min Read

ನವದೆಹಲಿ: ಅಪ್ರಾಪ್ತ (Minor) ಬಾಲಕಿಯನ್ನು ಮದುವೆಯಾಗಿ ಗರ್ಭಿಣಿ (Pregnant) ಮಾಡಿದ ಆರೋಪದ ಮೇಲೆ 17 ವರ್ಷದ ಹುಡುಗನನ್ನು ಬಂಧಿಸಿದ ಘಟನೆ ಪೂರ್ವ ದೆಹಲಿಯ (Delhi) ಲಕ್ಷ್ಮೀನಗರ ಪ್ರದೇಶದಲ್ಲಿ ನಡೆದಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ (LBS) ಆಸ್ಪತ್ರೆಯಿಂದ ಪಿಸಿಆರ್ ಪೊಲೀಸರಿಗೆ ಕರೆ ಮಾಡಿದ್ದು, ಏಳು ತಿಂಗಳ ಅಪ್ರಾಪ್ತ ಗರ್ಭಿಣಿ ತಪಾಸಣೆಗಾಗಿ ಬಂದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಬಾಲಕಿ ತಾನು ಮತ್ತು ಸೋದರ ಸಂಬಂಧಿ ಪರಸ್ಪರ ಪ್ರೀತಿಸಿದ್ದು, 2022ರ ಆಗಸ್ಟ್ 25 ರಂದು ಪಶ್ಚಿಮ ಬಂಗಾಳದಲ್ಲಿ (West Bengal) ‘ನಿಕಾಹ್’ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಸಾಕ್ಷಿ ಕೊಲ್ಲಲು 15 ದಿನಗಳ ಹಿಂದೆಯೇ ಹರಿದ್ವಾರದಿಂದ ಚಾಕು ಖರೀದಿಸಿದ್ದ ಸಾಹಿಲ್!

ಜನವರಿಯಲ್ಲಿ ದೆಹಲಿಗೆ ಬಂದ ಅವರು, ಪಶ್ಚಿಮ ಜವಾಹರ್ ಪಾರ್ಕ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತಪಾಸಣೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಬಂದಿದ್ದು, ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ವೈದ್ಯರು ಸಖಿ ಕೇಂದ್ರಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ – ಕುಟುಂಬದ ನಾಲ್ವರು ಸಜೀವ ದಹನ

ಅಪ್ರಾಪ್ತೆಯ ಜೊತೆ ಸಮಾಲೋಚನೆ ನಡೆಸಿ ವೈದ್ಯಕೀಯ ಪರೀಕ್ಷೆಯ ನಂತರ ಆಕೆಯನ್ನು ಆಸ್ಪತ್ರೆಯ ನಿಗಾದಲ್ಲಿ ಇರಿಸಲಾಗಿದೆ. ಅಲ್ಲದೇ ಹುಡುಗನನ್ನು ಬಂಧಿಸಿ ಜುವೆನೈಲ್ ಜಸ್ಟೀಸ್ ಬೋರ್ಡ್ (JJB) ಮುಂದೆ ಹಾಜರುಪಡಿಸಲಾಗಿದೆ. ಜೆಜೆಬಿ ಬಾಲಾಪರಾಧಿಯನ್ನು ಒಪ್ಪಂದದ ಮೇರೆಗೆ ಬಿಡುಗಡೆ ಮಾಡಿದ್ದು, ವಯಸ್ಸಿನ ಪರಿಶೀಲನೆಗಾಗಿ ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕರ್ನಾಟಕ ಸೇರಿದಂತೆ 3 ರಾಜ್ಯಗಳ 25 ಕಡೆ ಎನ್‌ಐ ದಾಳಿ – 17.50 ಲಕ್ಷ ಜಪ್ತಿ

Share This Article