ರಾಮನಗರ: ಹೃದಯಾಘಾತಕ್ಕೆ (Heart Attack) ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಹಸು ಮೇಯಿಸುವಾಗ ಹೃದಯಾಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕ ಗಿರೀಶ್, ಇಂದು ಮಧ್ಯಾಹ್ನ ಹಸು ಮೇಯಿಸುವಾಗ ಎದೆನೋವು ಕಾಣಿಸಿಕೊಂಡು ಜಮೀನಿನ ಬಳಿಯೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ
ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ಗಿರೀಶ್, ಯಾವುದೇ ದುಷ್ಚಟಗಳು ಇಲ್ಲದಿದ್ದರೂ ಹೃದಯಾಘಾತದಿಂದ ಸಾವನ್ನಪ್ಪಿರೋದು ಆತಂಕ ಸೃಷ್ಟಿಸಿದೆ. ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್