6 ವರ್ಷದ ಬಾಲಕನಿಗೆ 11 ಕಡೆ ಕಚ್ಚಿ ಗಾಯಗೊಳಿಸಿದ ನಾಯಿ

Public TV
1 Min Read

ಚಿತ್ರದುರ್ಗ: ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕನ (Boy) ಮೇಲೆ ನಾಯಿಯೊಂದು (Dog) ಎರಗಿ ಕೈಕಾಲುಗಳಿಗೆ ಸೇರಿ 11 ಕಡೆ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗದ  (Chitradurga) ಜೆಸಿಆರ್ ಬಡಾವಣೆಯಲ್ಲಿ ನಡೆದಿದೆ.

ಜೆಸಿಆರ್ ಬಡಾವಣೆಯ 6ನೇ ಅಡ್ಡರಸ್ತೆಯ ಜ್ಯೋತಿ-ನಾಗರಾಜ್ ದಂಪತಿಯ ಪುತ್ರ ಸಾಯಿ ಚರಣ್ (6) ನಿನ್ನೆ ಸಂಜೆ ವೇಳೆ ಮನೆ ಮುಂದೆ ತನ್ನ ಅಕ್ಕನೊಂದಿಗೆ ಆಟವಾಡುತ್ತಿದ್ದ. ಆಗ ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿರೋ 2 ನಾಯಿಗಳು, 11 ಕಡೆ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಅಲ್ಲಿನ ಸ್ಥಳೀಯರು ನಾಯಿಗಳಿಂದ ಬಾಲಕನ ರಕ್ಷಣೆಗೆ ಹರಸಾಹಸಪಟ್ಟಿದ್ದಾರೆ.

ಒಂದು ನಾಯಿ ಜನರ ಬೆದರಿಕೆಗೆ ಹೆದರಿ ಓಡಿ ಹೋದರು ಸಹ ಮತ್ತೊಂದು ನಾಯಿ, ಜನರ ಆವಾಜ್‌ಗೆ ಡೋಂಟ್ ಕೇರ್ ಎಂದಿದೆ. ಪದೇ ಪದೇ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸದ್ಯ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾನೆ. ಇದನ್ನೂ ಓದಿ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಯುವಕ ಅರೆಬೆತ್ತಲೆ ಪ್ರತಿಭಟನೆ- ಕಪಾಳಮೋಕ್ಷ ಮಾಡಿದ ಪಿಡಿಒ

ಬಾಲಕ ಸಾಯಿ ಚರಣ್ ತಾಯಿಯು ತಮ್ಮ ಮಗನ ಮೇಲಾದ ನಾಯಿ ದಾಳಿಯಿಂದ ಆತಂಕಗೊಂಡಿದ್ದಾರೆ. ಅಲ್ಲಿನ ಸ್ಥಳೀಯ ಮಾಂಸಾಹಾರದ ಹೋಟೆಲ್ ಸಿಬ್ಬಂದಿ ನಿರುಪಯುಕ್ತ ಮಾಂಸವನ್ನು ಬೀದಿಗೆ ಎಸೆಯುವ ಹಿನ್ನಲೆಯಲ್ಲಿ ಮಾಂಸದ ರುಚಿ ನೋಡಿರುವ ನಾಯಿಗಳು ಮಾಂಸ ಸಿಗದ ವೇಳೆ ನಗರದ ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ಈ ಬಗ್ಗೆ ಹಲವು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಿಲ್ಲ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2 ತಿಂಗಳ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ಯುವತಿ ಸಾವು!

Share This Article