ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ವ್ಯಕ್ತಿ ಸ್ಥಳದಲ್ಲೇ ಸಾವು

Public TV
1 Min Read

ಬೆಂಗಳೂರು: ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಮಾಗಡಿ (Magadi) ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ (Accident) ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪತ್ನಿಯ ಕಣ್ಣು, ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಕಟುಕ ಪತಿ!

ಮೃತ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಕಾರ್ಮಿಕರು – ಓರ್ವ ಸಾವು

Share This Article