ಹಾಸನ| ಪಾಳು ಬಿದ್ದಿದ್ದ ಕಟ್ಟಡ ಕುಸಿತ – ಬೀದಿಬದಿ ವ್ಯಾಪಾರ ಮಾಡ್ತಿದ್ದ ಇಬ್ಬರು ದುರ್ಮರಣ

Public TV
1 Min Read

ಹಾಸನ: ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ (Hassan) ಬೇಲೂರು (Belur) ಪಟ್ಟಣದ ಬಳಿ ನಡೆದಿದೆ.

ಮೃತರನ್ನು ನಜೀರ್ (38) ಹಾಗೂ ಅಮರನಾಥ್ (45) ಎಂದು ಗುರುತಿಸಲಾಗಿದೆ. ಇಬ್ಬರು ಹಣ್ನೂ ಖರೀದಿಗೆ ಬಂದಿದ್ದರು. ಈ ವೇಳೆ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಹಣ್ಣಿನ ವ್ಯಾಪಾರಿ ಜ್ಯೋತಿ ಮತ್ತು ಸೊಪ್ಪಿನ ವ್ಯಾಪಾರಿ ನೀಲಮ್ಮ ಎಂಬುವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಐಶ್ವರ್ಯಗೌಡ ವಂಚನೆ ಕೇಸ್‌ಗೆ ಟ್ವಿಸ್ಟ್ – ವಿನಯ್ ಕುಲಕರ್ಣಿ ಕಾರು ಚಾಲಕನ ವಿಚಾರಣೆ

ಪಾಳು ಬಿದ್ದ ಕಟ್ಟಡದ ಕೆಳಗೆ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದ ವೇಳೆ ದಿಢೀರ್ ಕಟ್ಟಡ ಕುಸಿದಿದೆ. ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ‘ಜೊತೆಯಲಿ ಇರುವೆನು ಹೀಗೆ ಎಂದು’ ಪತ್ನಿಗಾಗಿ ಹಾಡು ಹಾಡಿದ ಯಶ್

ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article