ಹಾಡಹಗಲೇ ಕೇರಳ ಸರ್ಕಾರದಿಂದ ಹಿಂದೂಗಳ ಮೇಲೆ ಅತ್ಯಾಚಾರ: ಅನಂತ್ ಕುಮಾರ್ ಹೆಗ್ಡೆ

Public TV
1 Min Read

ಬೆಂಗಳೂರು: ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜಾವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು. ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕಟು ಪದಗಳಿಂದ ಕೇರಳ ಸರ್ಕಾರದ ನಡೆಯನ್ನು ಅನಂತ್ ಕುಮಾರ್ ಹೆಗ್ಡೆ ಟೀಕಿಸಿದರು.


ಮಹಿಳೆಯರಾದ ಬಿಂದು ಹಾಗೂ ಕನಕದುರ್ಗ ಬುಧವಾರ 18 ಮೆಟ್ಟಿಲನ್ನು ಏರದೇ ಮಾಧ್ಯಮಗಳು ಮತ್ತು ವಿಐಪಿಗಳಿಗೆ ಮೀಸಲಾಗಿರುವ ದ್ವಾರದ ಮೂಲಕ ದೇವಾಲಯವನ್ನು ಪ್ರವೇಶಿಸಿದ್ದರು. ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *