ಕಾಲಿನಲ್ಲಿ ಬಲವಿಲ್ಲದಿದ್ದರೂ ಮಂಗಳೂರಿನ ಯಶಸ್ವಿ ಫುಡ್ ಡೆಲಿವರಿ ಬಾಯ್!

Public TV
1 Min Read

ಮಂಗಳೂರು: ಕಾಲಿನಲ್ಲಿ ಬಲವಿಲ್ಲದ ಅಂಗವಿಕಲರೊಬ್ಬರು ಯಶಸ್ವಿ ಫುಡ್ ಡೆಲಿವರಿ ಬಾಯ್ (Food Delivery Boy)  ಆಗಿ ಕಾರ್ಯನಿರ್ವಹಿಸುತ್ತಾ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

ಅಂಗಾಂಗ ಸರಿ ಇದ್ದವರನ್ನೂ ಮೀರಿಸುವಂತೆ ದುಡಿದು ಸಾಧನೆ ಮಾಡುತ್ತಿರುವ ಇವರ ಹೆಸರು ಪರಶುರಾಮ (Parashurama). ಇವರ ಹೆತ್ತವರು ಮೂಲತಃ ಬಿಜಾಪುರದವರಾಗಿದ್ದು (Vijayapura) , ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನ ಇವರ ಸ್ವಾವಲಂಬಿ ಬದುಕಿಗೆ ಸಾಥ್ ನೀಡಿತು. ಬಳಿಕ ಪರಶುರಾಮ ಸ್ವಿಗ್ಗಿ (Swiggy) ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದರು. ಇದೀಗ ಯಶಸ್ವಿ ಫಡ್ ಡೆಲಿವರಿ ಬಾಯ್ ಆಗಿ ಸಮಾಜಕ್ಕೆ ಹಾಗೂ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ಇದನ್ನೂ ಓದಿ: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ದುರಂತ- 13 ಜನರಿಗೆ ಗಾಯ

ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಪರಶುರಾಮ ಜ್ವರಕ್ಕೆ ತುತ್ತಾದರು. ಇದಕ್ಕೆ ವೈದ್ಯರೊಬ್ಬರು ನೀಡಿದ ಇಂಜೆಕ್ಷನ್‌ನಿಂದಾಗಿ ಇವರ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲಿನಲ್ಲಿ ಸ್ವಲ್ಪ ಬಲವಿದ್ದರೂ ಜೀವನ ಪರ್ಯಂತ ಅಂಗವೈಕಲ್ಯಕ್ಕೆ (Disability) ತುತ್ತಾದರು. 9ನೇ ತರಗತಿಯವರೆಗೆ ಶಿಕ್ಷಣ ಪಡೆದ ಇವರು ಮನೆಯಲ್ಲಿ ಕಡು ಬಡತನವಿದ್ದರಿಂದ ಭಿಕ್ಷಾಟನೆಗೆ (Begging) ಇಳಿದಿದ್ದರು. ನಂತರ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯೂರಿಟಿ ಗಾರ್ಡ್ (Security Guard) ಆಗಿ ದುಡಿಯಲಾರಂಭಿಸಿದ್ದರು. ಬಳಿಕ ದೈಹಿಕ ನ್ಯೂನ್ಯತೆಗೆ ಸೆಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಪ್ರಸ್ತುತ ಫುಡ್ ಡೆಲಿವರಿ ಬಾಯ್ ಆಗಿದ್ದಾರೆ. ಇದನ್ನೂ ಓದಿ: ನಟ ಶಾರುಖ್ ಮನೆಗೆ ನುಗ್ಗಿದ ಫ್ಯಾನ್ಸ್ ವಿರುದ್ಧ ದಾಖಾಲಾಯ್ತು ಕೇಸ್

ಕಷ್ಟವನ್ನು ಎದುರಿಸುವ ಛಲವೊಂದಿದ್ದರೆ ಎಂತಹ ಬರಸಿಡಿಲು ಎದುರಾದರೂ ಅದನ್ನು ಜಯಿಸಬಹುದು ಎನ್ನುವುದಕ್ಕೆ ಮಂಗಳೂರಿನ (Mangaluru) ಪರಶುರಾಮ ಉತ್ತಮ ಉದಾಹರಣೆ. ಕೈಕಾಲು ಸರಿ ಇದ್ದೂ ಭಿಕ್ಷಾಟನೆ ಮಾಡುವವರು ಇವರನ್ನು ನೋಡಿ ಕಲಿತುಕೊಳ್ಳಬೇಕು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದನ್ನೂ ಓದಿ: ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ

Share This Article
Leave a Comment

Leave a Reply

Your email address will not be published. Required fields are marked *