ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ

1 Min Read

ಬೆಂಗಳೂರು: ತಂದೆ-ತಾಯಿ (Father-Mother) ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ ಕೌಟುಂಬಿಕ ಕಲಹದಿಂದ ಇತ್ತೀಚಿಗೆ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದರು. ಇದನ್ನೂ ಓದಿ: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ್ ಹೆಗ್ಡೆ ನಿಧನ

ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ವಿಶ್‌

Share This Article