ರಾಗಿಗುಡ್ಡ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

By
1 Min Read

ಶಿವಮೊಗ್ಗ: ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಯುವಕರು ಚಾಕು ಇರಿದಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

ನಂದಕುಮಾರ (32) ಚಾಕು ಇರಿತಕ್ಕೊಳಗಾದ ಯುವಕ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅನ್ಯಕೋಮಿನ ಯುವಕರ ಗುಂಪು ನಂದಕುಮಾರ್ ಬಳಿ ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಕೇಳಿದೆ. ನಂದಕುಮಾರ ಮೊಬೈಲ್ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ 2 ದಿನ ವರುಣಾರ್ಭಟ – ಯೆಲ್ಲೋ ಅಲರ್ಟ್ ಘೋಷಣೆ

ಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸಲಾಗುತ್ತಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್