ಇನ್‌ಸ್ಟಾ ಪ್ರೇಮಿಯನ್ನ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ಸಾವು

Public TV
1 Min Read

ಕೊಪ್ಪಳ: ಇನ್‌ಸ್ಟಾದಲ್ಲಿ (Instagram) ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ನಡೆದಿದೆ.

ಪುಷ್ಪವತಿ (23) ಅನುಮಾನಾಸ್ಪದ ಸಾವನ್ನಪ್ಪಿರುವ ಗೃಹಿಣಿಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. 2ನೇ ದಿನಗಳ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ:  ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

ಮೂಲತಃ ಹಾಸನ ಜಿಲ್ಲೆಯ ಪುಷ್ಪವತಿ ಇನ್‌ಸ್ಟಾದಲ್ಲಿ ಪರಿಚಯವಾಗಿದ್ದ ಮರಿಯಪ್ಪ ಎಂಬಾತನನ್ನ ಪ್ರೀತಿಸಿ ಮದ್ವೆಯಾಗಿದ್ದರು (Marriage). ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗ ಹಿನ್ನೆಲೆ ಪತಿ ಮನೆಯವರೇ ಹೊಡೆದು ನೇಣು ಹಾಕಿರುವುದಾಗಿ ಪುಷ್ಪವತಿ ಕುಟುಂಬಸ್ಥರು ಆರೋಪಿಸಿದ್ದಾರೆ. 2 ದಿನಗಳ ಹಿಂದೆ ಸಾವನ್ನಪ್ಪಿದ್ರು, ಶವ ಇನ್ನು ಅದೇ ಸ್ಥಳದಲ್ಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಷ್ಪವತಿ ಕುಟುಂಬಸ್ಥರು ನಿನ್ನೆಯಷ್ಟೇ ಹಾಸನದಿಂದ ಕೊಪ್ಪಳಕ್ಕೆ ಬಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ ಅರೆಸ್ಟ್‌

Share This Article