ಸೆನ್ಸೇಷನಲ್ ಡೈರೆಕ್ಟರ್ ಜೊತೆ ಕೈ ಜೋಡಿಸಿದ ಲೈಕಾ ಪ್ರೊಡಕ್ಷನ್

Public TV
1 Min Read

ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಪ್ರೊಡಕ್ಷನ್ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಸಿನಿಮಾ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ.

ಲೈಕಾ ಬರೀ ಸೂಪರ್ ಸ್ಟಾರ್ ಸಿನಿಮಾಗಳನ್ನು ಮಾತ್ರವಲ್ಲ ಹೊಸ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸಿಕೊಡುತ್ತಿದೆ. ಮೋಸ್ಟ್ ಹ್ಯಾಪನಿಂಗ್ ಡೈರೆಕ್ಟರ್ ಜೂಡಾ ಆಂಥನಿ ಜೋಸೆಫ್ (Jude Anthany Joseph) ಜೊತೆ ಸಿನಿಮಾ ಮಾಡುವುದಾಗಿ ಲೈಕಾ (LYCA Production) ಅನೌನ್ಸ್ ಮಾಡಿದೆ. ಇದನ್ನೂ ಓದಿ:‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

 

ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿತ್ತು. ಕೇರಳ (Malayalam, Keral) ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ ಬಸ್ಟರ್ ಸಿನಿಮಾ ಆಗಿತ್ತು. ಈ ಚಿತ್ರವನ್ನು ನಿರ್ದೇಶಿಸಿದ್ದು ಇದೇ ಜೂಡಾ ಆಂಥನಿ ಜೋಸೆಫ್. ಇದೇ ನಿರ್ದೇಶಕರಿಗೆ ಈಗ ಲೈಕಾ ಸಿನಿಮಾ ಮಾಡುತ್ತಿದೆ. ಶೀಘ್ರದಲ್ಲಿಯೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಅಪ್ ಡೇಟ್ ನೀಡಲಿದೆ ಎಂದು ಅದು ತಿಳಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್