ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

Public TV
1 Min Read

– ಕನಸಲ್ಲಿ ಏಸು ಬಂದು ಶಿವಕುಮಾರಸ್ವಾಮಿ ಮೂರ್ತಿ ವಿರೂಪಗೊಳಿಸಲು ಹೇಳಿದ್ದ ಎಂದು ಕೃತ್ಯದ ಕಾರಣ ಬಿಚ್ಚಿಟ್ಟ ಆರೋಪಿ

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ (Shivakumara Swamiji) ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ. ಇದನ್ನೂ ಓದಿ: ಕೊಲೆ ಕೇಸ್‌ ಆರೋಪಿ ಕೈಬಿಟ್ಟ ಆರೋಪ; ಇನ್‌ಸ್ಪೆಕ್ಟರ್‌ ಸೇರಿ 6 ಸಿಬ್ಬಂದಿ ಅಮಾನತು

ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

7 ವರ್ಷಗಳ ಹಿಂದೆ ರಾಜ್‌ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ. ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ. ಇದನ್ನೂ ಓದಿ: ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಇದರ ಜೊತೆಗೆ ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಸಿಗುವಂತೆ ಭಿತ್ತಿಪತ್ರ ಹಂಚುತ್ತಿದ್ದ.

Share This Article