ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡ; ಹೆಂಡತಿ-ಮಕ್ಕಳ ನೆನಪಿಗಾಗಿ ಬಡಜನರಿಗೆ ಮನೆ ನಿರ್ಮಿಸಿಕೊಟ್ಟ ಕುಟುಂಬ ಪ್ರೇಮಿ

By
2 Min Read

ಮಡಿಕೇರಿ: ಅದು 2019.. ಕೊಡಗು (Kodagu) ಜಿಲ್ಲೆಯಲ್ಲಿ ಮಹಾಮಳೆಯ ಸಮಯ. ಜುಲೈ-ಆಗಸ್ಟ್ ತಿಂಗಳಲ್ಲಿ ಸುರಿದ ಬಾರಿ ಮಳೆಗೆ ಅ ಊರಿನಲ್ಲಿ ಬೆಟ್ಟವೇ ಕುಸಿದು ಸಾವು-ನೋವುಗಳು ಸಂಭವಿಸಿದವು. ಅದರಲ್ಲೂ ವ್ಯಕ್ತಿಯೊಬ್ಬರ ಹೆಂಡತಿ-ಮಕ್ಕಳು ಭೂಕುಸಿತದಿಂದ ಮರಣ ಹೊಂದಿದರು. ಅ ಘಟನೆಯಿಂದ ಹೊರಗೆ ಬಾರದೇ ಇರುವ ಅ ಊರಿನ ಜನರು ಇಂದಿಗೂ ಸಣ್ಣಮಳೆ ಬಂದರೂ ಭಯಪಡುತ್ತಾರೆ. ಅದರೆ ಅ ವ್ಯಕ್ತಿ ಮಾತ್ರ ತನ್ನ ಹೆಂಡತಿ-ಮಕ್ಕಳ ಮೇಲಿನ ಆಪಾರವಾದ ಪ್ರೀತಿಗಾಗಿ ಅವರಿಗೆ ಬಂದ ಪರಿಹಾರದ ಹಣದಲ್ಲಿ ಬಡ ಜನರಿಗೆ ಒಂದು ಸೂರು ಕಲ್ಪಿಸುವ ಮ‌ೂಲಕ ಜಿಲ್ಲೆಯ ಜನರಿಗೆ ಮಾದರಿಯಾಗಿದ್ದಾರೆ.

2019 ರಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮದಲ್ಲಿ ಮಹಾಮಳೆಗೆ ದುರ್ಘಟನೆಯೊಂದು ನಡೆದುಹೋಗಿತ್ತು. ಭಾರೀ ಮಳೆ ಇರುವ ಹಿನ್ನೆಲೆಯಲ್ಲಿ ಮನೆಯ ಮುಂದೆ ಪ್ರವಾಹ ಬರುತ್ತದೆ ಎಂದು ಬೆಟ್ಟದ ಮೇಲೆ ಆಶ್ರಯ ಪಡೆಯಲು ಹೊರಟಿದ್ದ ಜನರಿಗೆ ಪ್ರಕೃತಿಯೇ ಮುನಿಸಿಕೊಂಡು ಆ ಬೆಟ್ಟ ಪ್ರದೇಶವೇ ಭೂಕುಸಿತವಾಗಿತ್ತು. ಸುಮಾರು 10 ಜನರು ಮಣ್ಣಿನ ಅವಶೇಷಗಳಲ್ಲಿ ಸಿಲುಕಿ ಸಾವನ್ನಪ್ಪಿದ್ದರು. ಶವಗಳ ಹುಡುಕಾಟವು ಸುಮಾರು ವಾರಗಟ್ಟಲೇ ನಡೆಯಿತು. ಇದನ್ನೂ ಓದಿ: ಭೂಕಂಪ, ಸುನಾಮಿ ಸಂಭವಿಸಿದರೂ ಜಪಾನ್‌ನಲ್ಲಿ ಜಾಸ್ತಿ ಹಾನಿಯಾಗಲ್ಲ ಯಾಕೆ? ದೇಶ ಹೇಗೆ ಎದುರಿಸುತ್ತೆ?

ಅಂದು ಈ ಗ್ರಾಮದ ಪ್ರಭು ಕುಮಾರ್ ಎಂಬವರು ತನ್ನ ಹೆಂಡತಿ ಅನಸೂಯ ಹಾಗೂ ಮಕ್ಕಳಾದ ಅಮೃತ ಅದಿತಿಯನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ಪರಿಹಾರದ ಹಣವನ್ನು ಮೃತಪಟ್ಟವರ ಕುಟುಂಬಸ್ಥರಿಗೆ ನೀಡಲಾಗಿತ್ತು. ಪರಿಹಾರದ ಹಣವನ್ನು ಪಡೆದ ಪ್ರಭುಕುಮಾರ್, ಹೆಂಡತಿ-ಮಕ್ಕಳ ಹೆಸರಿನಲ್ಲಿ ಏನನ್ನಾದರೂ ಮಾಡಬೇಕು ಎಂದು ಯೋಚಿಸಿ, ತೋಟದ ಕಾರ್ಮಿಕರಾಗಿ ಸಂಕಷ್ಟದ ಬದುಕು ನಡೆಸುತ್ತಿರುವ ಬೋಜು, ಬೊಳ್ಳಕ್ಕಿ ಕುಟುಂಬಕ್ಕೆ ಒಂದು ಮನೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ತನ್ನ ಹೆಂಡತಿ-ಮಕ್ಕಳ ಆಸೆಯಂತೆ ಬಡವರ್ಗದ ಜನರಿಗೆ ಸಹಾಯ ಮಾಡಬೇಕು ಎಂಬ ಹಂಬಲದಿಂದ ತನ್ನ ಆಸೆ ಈಡೇರಿಸುವ ಕೆಲಸ ಮಾಡಿದ್ದಾರೆ.

ಈ ತೋರಾ ಗ್ರಾಮದಲ್ಲೇ ಚಿಕ್ಕ ತೋಟವನ್ನು ಹೊಂದಿರುವ ಬೋಜು, ಬೊಳ್ಳಚ್ಚಿ ಅವರ ಮಕ್ಕಳಾದ ಶರಣು, ಶಾಂತಿ ಕುಟುಂಬ ಚಿಕ್ಕ ಮತ್ತು ಹಳೆಯದಾದ ಹುಲ್ಲಿನ ಗುಡಿಸಲಿನಲ್ಲಿ ಜೀವನ ಸಾಗಿಸುತ್ತಿತ್ತು. ಇದನ್ನು ಗಮನಿಸಿದ ಪ್ರಭುಕುಮಾರ್ 80 ಸಾವಿರ ವೆಚ್ಚದಲ್ಲಿ ಸಿಮೆಂಟ್‌ ಕಾಂಪೌಂಡ್ ಗೋಡೆಗಳನ್ನು ಬಳಸಿ, ಸಿಮೆಂಟ್ ಶೀಟುಗಳನ್ನು ಹೊದಿಸಿ ಬೆಚ್ಚನೆಯ ಸೂರೊಂದನ್ನು ನಿರ್ಮಿಸಿಕೊಟ್ಟಿದ್ದಾರೆ. ಮಳೆಗಾಲ ಬಂತೆಂದರೆ ಕೆಸರು ಗದ್ದೆಯಂತಾಗುತ್ತಿದ್ದ ನೆಲ, ಹುಲ್ಲಿನ ಸಂದಿಗಳಿಂದ ತೊಟ್ಟಿಕ್ಕುವ ನೀರ ಹನಿಗಳಲ್ಲಿ ನೆನೆಯುತ್ತಲೇ ಬದುಕು ದೂಡುತ್ತಿತ್ತು ಶರಣು, ಶಾಂತಿ ಕುಟುಂಬ. ಇವರನ್ನು ಕಂಡಾಗಲೆಲ್ಲಾ ಪ್ರಭುಕುಮಾರ್ ಪತ್ನಿ ಅನಸೂಯ ಮಮ್ಮಲ ಮರುಗುತಿದ್ದರಂತೆ. ಹೀಗಾಗಿ ಈ ಕುಟುಂಬಕ್ಕೇ ತನ್ನ ಮೊದಲ ಮಡದಿಯ ಸವಿನೆನಪಿಗಾಗಿ ಸೂರೊಂದನ್ನು ನಿರ್ಮಿಸಿಕೊಟ್ಟು, ಹೆಂಡತಿ-ಮಕ್ಕಳ ಆಶಯ ಈಡೇರಿಸುವ ಕೆಲಸ ಮಾಡಿದ್ದಾರೆ. ಮನೆ ಕಲ್ಪಿಸಿಕೊಟ್ಟ ಪ್ರಭು ಅವರ ಕಾರ್ಯಕ್ಕೆ ಈ ಬಡ ಕುಟುಂಬ ಚಿರರುಣಿ ಎನ್ನುತ್ತಿದ್ದಾರೆ. ಇದನ್ನೂ ಓದಿ: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಗುಡಿಗೇ ಬೆಂಕಿಯಿಟ್ಟ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್