ಹಾವೇರಿ| ಶೀಲ ಶಂಕಿಸಿ ಪತ್ನಿ ಬರ್ಬರ ಹತ್ಯೆ – ಕೆರೆಗೆ ಹಾರಿ ಪತಿ ಆತ್ಮಹತ್ಯೆ

Public TV
1 Min Read

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ.

ಲಲಿತವ್ವ (55) ಬರ್ಬರವಾಗಿ ಹತ್ಯೆಯಾದ ಮಹಿಳೆ. ಆಕೆಯ ಪತಿ ಸಿದ್ದಪ್ಪ ಡಬ್ಬಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿ ಹತ್ಯೆ ಮಾಡಿ ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಹಾರಿ ಸಿದ್ದಪ್ಪ ಆತ್ಮಹತ್ಯೆ ಶರಣಾಗಿದ್ದಾನೆ. ಇದನ್ನೂ ಓದಿ: ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

ನಿನ್ನೆ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆಯಿತು. ಜಗಳ ವಿಕೋಪಕ್ಕೆ ಹೋಗಿ ಪತ್ನಿ ಲಲಿತವ್ವಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು, ಒಬ್ಬ ಮಗ ಇದ್ದಾನೆ. ಮೊದಲಿನಿಂದಲೂ ಸಿದ್ದಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ. ಆಗಾಗ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.

ಇಬ್ಬರ ಜಗಳ ಕೇಸ್ ಹಲವು ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ಹೋಗಿ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

Share This Article