ಕಾಶಿ | ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಬಾಗಲಕೋಟೆಯ ವ್ಯಕ್ತಿ ಸಾವು

Public TV
1 Min Read

ಬಾಗಲಕೋಟೆ: ಕಾಶಿಯಲ್ಲಿ (Kashi) ನದಿಸ್ನಾನ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಗಲಕೋಟೆಯ (Bagalkote) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸತೀಶ್ ಜೋಷಿ (44) ಮೃತ ದುರ್ದೈವಿ. ಇವರು ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ವಾರದ ಹಿಂದೆ ಸತೀಶ್ ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: Aeroindia 2025 | ಬೆಂಗಳೂರಿಗೆ ಬಂದಿಳಿದ ಅಮೆರಿಕ – ರಷ್ಯಾ ಜೆಟ್

ಕುಂಭಮೇಳದಲ್ಲಿ ಭಾಗಿಯಾದ ಬಳಿಕ ಸತೀಶ್ ಹಾಗೂ ಕುಟುಂಬಸ್ಥರು ಅಲ್ಲಿಂದ ಕಾಶಿಗೆ ತೆರಳಿದ್ದರು. 35 ಜನ ಸೇರಿ ಪ್ರವಾಸಿ ಬಸ್‌ನಲ್ಲಿ ತೆರಳಿದ್ದರು. ಇಂದು ಬೆಳಗಿನ ಜಾವ ಕಾಶಿಯಲ್ಲಿ ನದಿಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿದ್ದ ಸತೀಶ್ ಶವವಾಗಿ ಹೊರಬಂದಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇದನ್ನೂ ಓದಿ: ಕಲ್ಯಾಣಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು – ಮೊಬೈಲ್‌ನಲ್ಲಿ ದೃಶ್ಯ ಸೆರೆ

Share This Article