ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪ!

Public TV
1 Min Read

ಬೀದರ್: ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ (Man Govt Bus) ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಔರಾದ್ ತಾಲೂಕಿನ ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಬೆಳಗ್ಗೆಯಿಂದ ನಿಲ್ದಾಣದಲ್ಲಿ ಕುಳಿತರೂ ತನ್ನ ಊರಿಗೆ ಹೋಗಲು ಬಸ್‌ (KSRTC Bus) ಸಿಗದ ಕಾರಣ ಬೇಸತ್ತಿದ್ದಾನೆ. ಈ ವೇಳೆ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ನಿಲ್ದಾಣದಲ್ಲಿ ಎಂಟ್ರಿ ಮಾಡಿಕೊಂಡು ಹೋಗಿ ಬರುವ ಸಮಯದಲ್ಲಿ ಈ ಘಟನೆಯಾಗಿದೆ.  ಇದನ್ನೂ ಓದಿ: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ ದುರುಳರು

ಕುಡಿದ ಮತ್ತಿನಲ್ಲಿ ಯಶಪ್ಪ ಬಸ್ ಚಲಾಯಿಸಿದ್ದು, ಬಸ್‍ನಲ್ಲಿರುವ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈತ ಬಸ್ಸನ್ನು ಕ್ರೂಸರ್ ವಾಹನಕ್ಕೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಯಶಪ್ಪ ಸೂರ್ಯವಂಶಿ ಇಟಂಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಬಸ್ ನಿಲ್ದಾಣಕ್ಕೆ ಬಂದು ಬಸ್ ಗಾಗಿ ಕಾದರೂ ಬಸ್ ಸಿಗದೆ ಸಾರಿಗೆ ಬಸ್ ಚಲಾಯಿಸಿದ್ದಾನೆ.

ಡಿವೈಡರ್ ಗೆ ಬಸ್ ಡಿಕ್ಕಿಯಾಗುತ್ತಿದ್ದಂತ್ತೆ ಯಶಪ್ಪ ಸೂರ್ಯವಂಶಿ ಓಡಿ ಹೋಗುವಾಗ ಸಾರ್ವಜನಿಕರ ಸಹಾಯದಿಂದ ಸುನೀಲ್ ಕುಮಾರ್ ಆತನನ್ನು ಹಿಡಿದು ಔರಾದ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

 

Share This Article