ರಾಮನಗರ: ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪರಿಚಯವಾದ ಬಾಲಕಿಗೆ ಪುಸಲಾಯಿಸಿ ಗರ್ಭಿಣಿ ಮಾಡಿದ್ದ ಯುವಕನನ್ನ ಮಾಗಡಿ ಪೊಲೀಸರು (Magadi Police) ಬಂಧಿಸಿದ್ದಾರೆ.
ತುಮಕೂರು ಮೂಲದ ನರಸಿಂಹಮೂರ್ತಿ (25) ಬಂಧಿತ ಆರೋಪಿ. ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಸೋಷಿಯಲ್ ಮೀಡಿಯಾ (Social Media) ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಯನ್ನ ಪರಿಚಯಿಸಿಕೊಂಡಿದ್ದ. ಇದನ್ನೂ ಓದಿ: ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು
ಕೆಲ ದಿನಗಳ ನಂತರ ಸ್ನೇಹ ಬೆಳಸಿಕೊಂಡಿದ್ದ. ಸಲುಗೆ ಬೆಳೆದ ನಂತರ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ ಬಾಲಕಿಯನ್ನ ಗರ್ಭಿಣಿ ಮಾಡಿದ್ದಾನೆ. ವಿಷಯ ತಿಳಿದ ಬಾಲಕಿ ಪೋಷಕರು ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ತನಿಖೆ ನಡೆಸಿದ ಪೊಲೀಸರು ಇನ್‌ಸ್ಟಾಗ್ರಾಮ್ ಐಡಿ ಮೂಲಕ ಆರೋಪಿಯನ್ನ ಬಂಧಿಸಿ ಪೋಕ್ಸೊ ಕೇಸ್ ದಾಖಲಿಸಿದ್ದಾರೆ. ಬಂಧಿತನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಇಂದು ಕೊನೆಯ ಪಾಯಿಂಟ್‌ನಲ್ಲಿ ಶೋಧ