ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವರನ್ನು ಕೊಚ್ಚಿ ಕೊಲೆಗೈದ ಭೀಕರ ಕೃತ್ಯವೊಂದು ಬಿಜಾಪುರ ಜಿಲ್ಲೆಯಲ್ಲಿ ಇಂದು ನಡೆದಿದೆ.
ಜಿಲ್ಲೆಯ ಇಂಡಿ ತಾಲೂಕಿನ ಬರಡೋಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಲ್ಲಪ್ಪ ಅಗಸರ(35) ಕೊಲೆಯಾದ ದುರ್ದೈವಿ. ಮಲ್ಲಪ್ಪ ರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಕೊಲೆಗೈದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.