ಮಂಗಳೂರು: ಇಲ್ಲಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ (Netravathi River) ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು (Aadhar Card) ಪತ್ತೆಯಾಗಿವೆ.
ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನ ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯರು ಎಲ್ಲಾ ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ
ಇನ್ನು, ಆಧಾರ್ ಕಾರ್ಡ್ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದ್ದಾರೆ. ಈ ಕೃತ್ಯದ ಹಿಂದೆ ಇರುವವರನ್ನ ತಕ್ಷಣ ಪತ್ತೆ ಹಚ್ಚಿನ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

