ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಯಾತ್ರಾರ್ಥಿ ಟಾಯ್ಲೆಟ್‌ನಲ್ಲಿ ಸಾವು

Public TV
1 Min Read

ಚಿಕ್ಕಮಗಳೂರು: ಬೆಂಗಳೂರಿನಿಂದ (Bengaluru) ಧರ್ಮಸ್ಥಳಕ್ಕೆ (Dharmasthala) ಯಾತ್ರೆ ಹೊರಟಿದ್ದ ಯಾತ್ರಾರ್ಥಿ (Pilgrim) ಶೌಚಾಲಯದಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನು ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ಮೂಲತಃ ಆಂಧ್ರಪ್ರದೇಶದ ಅನಂತಪುರದವರಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ (Toilet) ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್‌ಗೆ ಶೌಚಾಲಯದಲ್ಲಿ ಹೃದಯಾಘಾತವಾಗಿ ಬಳಲಿ ಬಿದ್ದಿದ್ದರು.ಇದನ್ನೂ ಓದಿ: ಬಾಂಬ್‌ ಸ್ಫೋಟ ಪ್ರಕರಣ – ಇದುವರೆಗೆ ಯಾರನ್ನೂ ಬಂಧಿಸಿಲ್ಲ: ಪೊಲೀಸ್‌ ಆಯುಕ್ತ ಸ್ಪಷ್ಟನೆ

ಈ ವೇಳೆ ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಅಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಅಮ್ಮ ಕಾಲ್‌ ಮಾಡದಿದ್ದರೆ…- ಕೆಫೆ ಬ್ಲಾಸ್ಟ್‌ ಭಯಾನಕ ಸತ್ಯ ಬಿಚ್ಚಿಟ್ಟ ಟೆಕ್ಕಿ

Share This Article