ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ತಾಕಿದ ಬೆಂಕಿಯ ಬಿಸಿ

Public TV
1 Min Read

ಬೆಂಗಳೂರು: ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಬಟ್ಟೆಗೆ ಬೆಂಕಿಯ ಬಿಸಿ ತಾಗಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ

ವಿಧಾನಸೌಧದ (Vidhana Soudha) ಗ್ರ‍್ಯಾಂಡ್ ಸ್ಟೆಪ್ ನಲ್ಲಿ 200ನೇ ಕಿತ್ತೂರು ವಿಜಯೋತ್ಸವ ಆಚರಣೆ ಕಾರ್ಯಕ್ರಮಕ್ಕೆ ಇಂದು ಸಿಎಂ ಚಾಲನೆ ನೀಡಿದರು. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಜಾಗ ಬಿಡಲು ಸಿಎಂ ಮುಂದಾದರು.

 

ಈ ವೇಳೆ ಸಿಎಂ ದೀಪದ ಹತ್ತಿರ ಬಂದಾಗ ಎಡಕೈಗೆ ಬೆಂಕಿಯ ಕಿಡಿ ತಾಗಿದೆ. ಬಟ್ಟೆಗೆ ಆಕಸ್ಮಿಕವಾಗಿ ತಾಕಿದ ಕಿಡಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ಆರಿಸಿದ್ದಾರೆ. ಇದನ್ನೂ ಓದಿ: ಇರಾನ್‌ನಿಂದ ಕ್ಷಿಪಣಿ ದಾಳಿ – ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು, ಟರ್ಕಿಯಲ್ಲಿ ಲ್ಯಾಂಡಿಂಗ್‌

ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸ್ಥಿತರಿದ್ದರು.

 

Share This Article