ನಾಳೆ ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ವಿಶೇಷ ಪ್ರದರ್ಶನ

Public TV
1 Min Read

ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಎಸ್.ಲಿಂಗದೇವರು (B.S.Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratapur Viragi) ವಿಶೇಷ ಪ್ರದರ್ಶನವನ್ನು ನಾಳೆ ಮಧ್ಯಾಹ್ನ 1ಕ್ಕೆ ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಆಯೋಜನೆ ಮಾಡಲಾಗಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಲಿಂಗದೇವರು, ‘ವಿರಾಟಪುರ ವಿರಾಗಿ ಮತ್ತೊಮ್ಮೆ ನವರಂಗ್ ಚಿತ್ರಮಂದಿರದಲ್ಲಿ. ಈ ಅವಕಾಶವನ್ನು ಗುರು ಬಂಧುಗಳು ಹಾಗೂ ಚಲನಚಿತ್ರ ಅಭಿಮಾನಿಗಳು ನೋಡಲು ಟಿಕೆಟ್ ಗಾಗಿ ಜಿ.ಪ್ರಕಾಶ್ 9035325011 ಅವರನ್ನು ಸಂಪರ್ಕಿಸಿ’ ಎಂದು ಬರೆದುಕೊಂಡಿದ್ದಾರೆ.

ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ

ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮತ್ತೊಂದು ಮದುವೆ ಸಂಭ್ರಮದಲ್ಲಿ ಸ್ವರಾ ಭಾಸ್ಕರ್

ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

Share This Article
Leave a Comment

Leave a Reply

Your email address will not be published. Required fields are marked *