ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Public TV
0 Min Read

ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.

ಮೇಘಾಶ್ರೀ (18) ಮೃತ ವಿದ್ಯಾರ್ಥಿನಿ. ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ಭಾಗಿ – ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು

ಮೇಘಾಶ್ರೀ ಹೋಂ ಸಿಕ್‍ಗೆ ಒಳಗಾಗಿದ್ದಳು. ಇದೇ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾ ಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share This Article