ಬೆಂಗಳೂರು: ಮಧ್ಯರಾತ್ರಿ ಕಿಟಕಿಯಿಂದ ಕೈ ಹಾಕಿ ನಿದ್ದೆಯಲ್ಲಿದ್ದ ಮಹಿಳೆಯ ಚಿನ್ನದ ಸರವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಕಿಟಕಿ ಮೂಲಕ ನಿದ್ದೆ ಮಾಡ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಲಾಗಿದೆ. ಸೈಯದ್ ಅಸ್ಲಾಂ ಬಂಧಿತ ಮನೆಗಳ್ಳ. ಎರಡು ತಿಂಗಳ ಹಿಂದೆ ಸಾಯಿ ಲೇಔಟ್ ನಿವಾಸಿಯೊಬ್ಬರು ಮನೆಯಲ್ಲಿ ಮಲಗಿದ್ದಾಗ ಕಿಟಕಿ ಒಳಗಿಂದ ಕೈ ಹಾಕಿ ಮಾಂಗಲ್ಯ ಸರ ಕದ್ದಿದ್ದ. ಕತ್ತಿನ ಬಳಿ ಏನೋ ಸ್ಪರ್ಶವಾದಂತಾಗಿ ಮಹಿಳೆ ಎಚ್ಚರಗೊಂಡು ನೋಡಿದಾಗ ಮಾಂಗಲ್ಯ ಸರ ಮಂಗಮಾಯವಾಗಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಪ್ರಿಯಕರನಿಂದ ವಿದ್ಯಾರ್ಥಿನಿಯ ಬರ್ಬರ ಕೊಲೆ
ಮಹಿಳೆ ನೀಡಿದ ದೂರು ದಾಖಲಿಸಿಕೊಂಡ ವಿದ್ಯಾರಣ್ಯಪುರಂ ಪೊಲೀಸರು ಮೈಸೂರಿನ ಸೈಯದ್ ಅಸ್ಲಾಂನನ್ನು ಬಂಧಿಸಿದ್ದಾರೆ. ಕಳ್ಳನಿಂದ 23 ಲಕ್ಷದ 126 ಗ್ರಾಂ ಚಿನ್ನ, 4 ಕೆಜಿ ಬೆಳ್ಳಿ, ವಾಚ್, ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯಲ್ಲಿ ಆರೋಪಿ ಬೇರೆ ಬೇರೆ ಕಡೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಕೊಟ್ಟ ಮಾಹಿತಿ ಮೇರೆಗೆ 23 ಲಕ್ಷ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.