ಸರ್ಕಾರಿ ಬಸ್‌ನಲ್ಲಿ ಬರೋರೇ ಇವಳ ಟಾರ್ಗೆಟ್‌; 22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳಿ ಬಂಧನ!

1 Min Read

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ (KSRTC Bus) ಗುರಿಯಾಗಿಸಿಕೊಂಡು ಬರೋಬ್ಬರಿ 22 ಲಕ್ಷ ರೂ. ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಅಂದಹಾಗೆ ಚಿಂತಾಮಣಿ (ChintaMani) ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ ದೇವಸ್ಥಾನಕ್ಕೆ ಹೋಗುವ ಸಲುವಾಗಿ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ ಚಿನ್ನಾಭರಣ (Gold Jewellery) ಕಳವು ಮಾಡುತ್ತಿದ್ದಳಂತೆ. ಇದನ್ನೂ ಓದಿ: ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಸಪ್ಲೈ – 4 ಕೋಟಿ ಮಾಲು ಸಮೇತ ಸಿಕ್ಕಿಬಿದ್ದ ಉಗಾಂಡ ಮಹಿಳೆ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಕುಪ್ಪಂ ಮೂಲದ ಮೀನಾಕ್ಷಿ ಎಂಬಾಕೆಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆ ಬಳಿ 22 ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಖರೀದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಂದ ಅನ್ಯಾಯ – ಮೆಕ್ಕೆಜೋಳ ಸುರಿದು ರೈತರ ಆಕ್ರೋಶ!

Share This Article