ಮಲ್ಲೇಶ್ವರದಲ್ಲಿ ಬೇಕರಿಗೆ ನುಗ್ಗಿದ ಲಾರಿ – ತಪ್ಪಿದ ಭಾರೀ ದುರಂತ

Public TV
1 Min Read

ಬೆಂಗಳೂರು: ನಿಯಂತ್ರಣ ತಪ್ಪಿ ಲಾರಿಯೊಂದು (Lorry) ಬೇಕರಿಗೆ ನುಗ್ಗಿದ ಘಟನೆ ಮಲ್ಲೇಶ್ವರದಲ್ಲಿರುವ (Malleshwaram) ಲಿಂಕ್ ರಸ್ತೆಯಲ್ಲಿ ನಡೆದಿದೆ.

ಬೆಳಗಿನ ಜಾವದಲ್ಲಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಹಗಲಿನಲ್ಲಿ ಘಟನೆ ನಡೆದಿದ್ದರೆ ಭಾರೀ ದುರಂತ ಸಂಭವಿಸುವ ಸಾಧ್ಯತೆ ಇತ್ತು.ಇದನ್ನೂ ಓದಿ: ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯ್ತು: ಭಾರತದ ಮೇಲೆ ಗೂಬೆ ಕೂರಿಸಿದ ನೇಪಾಳದ ಮಾಜಿ ಪ್ರಧಾನಿ

 

ಬೆಳಗಿನ ಜಾವ 4:30ಕ್ಕೆ ಈ ಘಟನೆ ನಡೆದಿದೆ. ಲಾರಿ ಗುದ್ದಿದ ಪರಿಣಾಮ ಬೇಕರಿಯ ಬಾಗಿಲು ಜಖಂಗೊಂಡು ಗೋಡೆ ಹಾಳಾಗಿದೆ. ಪುಟ್‌ಪಾತ್ ಕಾಂಕ್ರಿಟ್ ಕುಸಿದಿದೆ. ಮಲ್ಲೇಶ್ವರಂ ಪೊಲೀಸರು ಲಾರಿ ಮತ್ತು ಚಾಲಕನ  ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ಯಾ ಅಥವಾ ಬ್ರೇಕ್ ಫೇಲ್ ಆಗಿ ಈ ಘಟನೆ ನಡೆದಿದ್ಯಾ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ.

Share This Article