ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

By
1 Min Read

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ  ತನ್ನದಾಗಿಸಿಕೊಂಡಿದೆ.

ಶ್ರೀರಂಗ , ಕೆಂಪಿರ್ವೆ ಮತ್ತು  ಆಮ್ಲೆಟ್  ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ (Venkat Bharadwaj) ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ  (Naguvin Hugala mele) ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್ (Abhidas), ಶರಣ್ಯ ಶೆಟ್ಟಿ (Sharanya Shetty)ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

ಈಗಾಗಲೇ ಬಿಡುಗಡೆಯಾಗಿರುವ ಇರಲಿ ಬಿಡು ಈ ಜೀವ ನಿನಗಾಗಿ ಎಂಬ ರೋಮ್ಯಾಂಟಿಕ್ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವೆಂಕಟ್‌ ಭಾರದ್ವಾಜ್‌ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸಿರುವ ನಗುವಿನ ಹೂಗಳ ಮೇಲೆ ಸಿನಿಮಾವನ್ನು ಟಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಾದ  ಬೆಂಗಾಲ್ ಟೈಗರ್, ಪಂಥಂ, ಒರೆ ಬುಜ್ಜುಗ , ಒಡೇಲ ರೈಲ್ವೆ ಸ್ಟೇಷನ್  ಮತ್ತು ಪ್ಯಾರ್  ಮೇ ಪಡೀಪೊಯಾನು ಚಿತ್ರಗಳನ್ನು ನಿರ್ಮಾಣ ಮಾಡಿರುವ  ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ.

ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸವಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Share This Article