The Kerala Story Effect: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯಿಂದ ಪ್ರಿಯಕರನ ವಿರುದ್ಧ ರೇಪ್ ಕೇಸ್

By
1 Min Read

ಭೋಫಾಲ್: ದಿ ಕೇರಳ ಸ್ಟೋರಿ ಸಿನಿಮಾ ನೋಡಿದ ಮಧ್ಯಪ್ರದೇಶದ (Madhya Pradesh) ಇಂದೋರ್‌ನ ಯುವತಿಯೊಬ್ಬಳು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ (Live IN RelationShip) ತನ್ನ ಪ್ರಿಯಕರನ ವಿರುದ್ಧವೇ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.

ಯುವತಿಯು ತನ್ನನ್ನು ಪ್ರೀತಿ ಹೆಸರಲ್ಲಿ ಟ್ರ್ಯಾಪ್‌ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ತನ್ನ ಮತಾಂತರವಾಗುವಂತೆ (Conversion) ಒತ್ತಡ ಹೇರುತ್ತಿದ್ದಾನೆ ಎಂದು ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, 23 ವರ್ಷದ ಯುವಕನನ್ನ ಬಂಧಿಸಿದ್ದಾರೆ.

ಇತ್ತೀಚಿಗೆ ನಾವಿಬ್ಬರೂ `ದಿ ಕೇರಳ ಸ್ಟೋರಿ’ ಸಿನಿಮಾ (The Kerala Story Cinema) ನೋಡಿದ್ವಿ, ಇದಾದ ನಂತರ ನಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ಮಾಹಿತಿ ಪ್ರಕಾರ, ಆ ಯುವಕನ ಜೊತೆಯೇ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದಾಗಿ ದೂರುದಾರ ಯುವತಿ ತಿಳಿಸಿದ್ದಾಳೆ. ಅಂದ ಹಾಗೇ, ಆರೋಪಿ ಪ್ರಿಯಕರ 12ನೇ ತರಗತಿ ಪಾಸ್ ಆಗಿದ್ದು, ನಿರುದ್ಯೋಗಿಯಾಗಿದ್ದಾನೆ. ಸಂತ್ರಸ್ತ ಯುವತಿ ಸುಶಿಕ್ಷಿತಳಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಯುವಕನ ವಿರುದ್ಧ ಬಲವಂತ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ, ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2021 ಹಾಗೂ IPC ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ದಿನೇಶ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: IT ಕ್ಷೇತ್ರದಲ್ಲಿ ಒಂದೇ ವರ್ಷಕ್ಕೆ 60 ಸಾವಿರ ಜಾಬ್‌ ಕಟ್‌

Share This Article