ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದುರ್ಮರಣ!

Public TV
1 Min Read

ಮಂಗಳೂರು: ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದುರ್ಮರಣಕ್ಕೀಡಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ (Mani, Dakshina Kannada) ಎಂಬಲ್ಲಿ ನಡೆದಿದೆ.


ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಜೊತೆ ಡ್ಯಾನ್ಸ್ ಮಾಸ್ಟರ್ ಫೋಟೋ – ಭಜರಂಗದಳದ ಕಾರ್ಯಕರ್ತರಿಂದ ಹಲ್ಲೆ 7 ಜನ ಅರೆಸ್ಟ್

ಆಗಿದ್ದೇನು..?: ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ಹೀಗಾಗಿ ರಾಧಾ ಅವರು ಮಹಿಳೆಗೆ ಸೀಟು ಬಿಟ್ಟುಕೊಟ್ಟಿದ್ದಾರೆ. ಬಳಿಕ ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಾಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article