ನೆಲಮಂಗಲ: ತಂಗಿಯ ಸೀಮಂತಕ್ಕೆಂದು ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲದ (Nelamangala) ಮಾದವಾರ ಬಸ್ ನಿಲ್ದಾಣದ ಬಳಿ ನಡೆದಿದೆ.
ಹಾಲಗೇರಿ ಗ್ರಾಮದ ಕುಷ್ಠಿಗಿ ತಾಲೂಕಿನ ಜಯಶ್ರೀ (42) ಮೃತ ಮಹಿಳೆ. ಗುರುವಾರ ಬೆಳಿಗ್ಗೆ ಬಸ್ಸಿನಿಂದ ಇಳಿಯುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ:ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ
ಮೃತ ಜಯಶ್ರೀ ತಂಗಿಯ ಸೀಮಂತಕ್ಕೆಂದು ಮಾದಾವರಕ್ಕೆ ಬಂದಿದ್ದರು. ಮಾದಾವರ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿಯುವಾಗ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಜಯಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಶವಗಾರಕ್ಕೆ ಕಳುಹಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪೊಲೀಸರು ಕಾರು ಚಾಲಕ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು