3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

Public TV
1 Min Read

– ಅತ್ಯಾಚಾರವೆಸಗಿ ಕೊಲೆ ಶಂಕೆ, ಆರೋಪಿ ಬಂಧನ

ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ (Woman) ಶವವಾಗಿ ಪತ್ತೆಯಾದ ಘಟನೆ ಕೋಲಾರ (Kolar) ಜಿಲ್ಲೆಯಲ್ಲಿ ನಡೆದಿದೆ.

ಅಗರ ಗ್ರಾಮದ ಶಾರದಮ್ಮ (38) ಮೃತ ಮಹಿಳೆ. ಈಕೆಯ ಮೃತದೇಹ ಮುಳಬಾಗಿಲು ತಾಲೂಕಿನ ಅಗರ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸ್ಥಳ ಮಹಜರ್‌ ವೇಳೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಬಂಧನ

ಅಗರ ಗ್ರಾಮದ ವೆಂಕಟರಾಮ್ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಆತನನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರದ ಅನುಮತಿ: ಜೋಶಿ

Share This Article