ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಪತಿ ವಿರುದ್ಧ ಕೊಲೆ ಆರೋಪ

Public TV
1 Min Read

ಹಾಸನ: ವರದಕ್ಷಿಣೆ (Dowry) ಕಿರುಕುಳಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪತಿ ವಿರುದ್ಧ ಕೊಲೆ ಆರೋಪ ಹೊರಿಸಿರುವ ಘಟನೆ ಹಾಸನ (Hassan) ತಾಲ್ಲೂಕಿನ, ಯಡಿಯೂರು ಗ್ರಾಮದಲ್ಲಿ ನಡೆದಿದೆ.

ಅನಿತಾ (27) ಮೃತಪಟ್ಟ ಮಹಿಳೆ. 8 ವರ್ಷಗಳ ಹಿಂದೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಅನಿತಾಳನ್ನ ಯಡಿಯೂರು ಗ್ರಾಮದ ಯೋಗೇಶ್‌ಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು, ಮೊದಲ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು. ಇದನ್ನೂ ಓದಿ: ತಿಂಗಳ ಹಿಂದೆ ಮದ್ವೆಯಾದ ಜೋಡಿ ಸೇರಿ ಯಾತ್ರೆಗೆ ತೆರಳಿರೋ 7 ಮಂದಿ ಸುರಕ್ಷಿತ

CRIME COURT

ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇತ್ತು. ಕ್ರಮೇಣ ಯೋಗೇಶ್‌ ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಹತ್ತಾರು ಬಾರಿ ಸಂದಾನ ಮಾಡಿ ಕಳುಹಿಸಲಾಗಿತ್ತು. ಎರಡು ಬಾರಿ ಪೊಲೀಸ್‌ ಠಾಣೆಗೂ ದೂರು ನೀಡಲಾಗಿತ್ತು. ಆದ್ರೆ ಯೋಗೇಶ್‌ ವರದಕ್ಷಿಣೆಗಾಗಿ ಕಿರುಕುಳ ನೀಡುವುದನ್ನ ಬಿಟ್ಟಿರಲಿಲ್ಲ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೇಳದೆ ಅಡುಗೆಗೆ ಟೊಮೆಟೊ ಬಳಸಿದ ಪತಿ – ಕೋಪಗೊಂಡು ಮಗಳೊಂದಿಗೆ ಮನೆಬಿಟ್ಟ ಹೆಂಡತಿ

ಕಳೆದ ಒಂದು ತಿಂಗಳ ಹಿಂದೆಯೂ ಪತಿ ಜಗಳ ತೆಗೆದಿದ್ದರಿಂದ ಅನಿತಾ ತವರು ಮನೆಗೆ ಬಂದಿದ್ದಳು. ಮತ್ತೆ ರಾಜೀ ಸಂಧಾನ ಆದ ನಂತರ ಯೋಗೇಶ್‌ ಆಕೆಯನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಬುಧವಾರ ಅನಿತಾ ತನ್ನ ಪೋಷಕರಿಗೆ ಕರೆ ಮಾಡಿ ಹಲ್ಲೆ ಮಾಡುತ್ತಿದ್ದಾನೆ ಬನ್ನಿ ಅಂತಾ ಕರೆದಿದ್ದಾಳೆ. ಪೋಷಕರು ಬರುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಬಳಿಕ ಪತಿ ಆಕೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ.

ಅನಿತಾಳನ್ನ ಯೋಗೇಶ್ ಕೊಲೆ ಮಾಡಿದ್ದು, ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಸದ್ಯ ಕೇಸ್‌ ದಾಖಲಿಸಿಕೊಂಡಿರುವ ಹಾಸನ ಬಡಾವಣೆ ಪೊಲೀಸರು (Hassan Police) ತನಿಖೆ ಮುಂದುವರಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್