ಬೆಂಗ್ಳೂರು| ಅತ್ಯಾಚಾರ ಎಸಗಿ ಮಹಿಳೆ ಭೀಕರ ಹತ್ಯೆ ಮಾಡಿ, ನಿರ್ಜನ ಪ್ರದೇಶದಲ್ಲಿ ಎಸೆದು ಹೋದ ಕಿಡಿಗೇಡಿಗಳು

Public TV
1 Min Read

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ.

ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.‌ಚೆನ್ನಸಂದ್ರ ಲೇಕ್‌ನಲ್ಲಿ ರಕ್ತಸಿಕ್ತವಾಗಿ ಬಿದ್ದಿರೋ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಕೆರೆಯಲ್ಲಿ ಪತ್ತೆಯಾಗಿರುವ ಮೃತದೇಹ ಬಾಂಗ್ಲಾ ಮೂಲದ ನಜ್ಮ ಎಂಬ ಮಹಿಳೆಯದ್ದು ಎಂದು ರಾಮಮೂರ್ತಿ ನಗರ ಪೊಲೀಸರು ಖಾತರಿ ಪಡಿಸಿಕೊಂಡಿದ್ದಾರೆ.

ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿರುವ ಮಹಿಳೆ ನಜ್ಮಾ ಅತ್ಯಾಚಾರ ಆಗಿರುವ ಸ್ಥಳದಿಂದ ಅನತಿ ದೂರದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಗೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನ ಕೆಲಸ ಮುಗಿಸಿ ಕೊತ್ತನೂರಿನಲ್ಲಿರುವ ಮನೆ ಕಡೆ ಹೊರಟಿದ್ದಾರೆ. ಮಹಿಳೆ ಮನೆಗೆ ಬರದೇ ಇದ್ದಾಗ ಗಂಡ ಸುಮನ್ ಅನುಮಾನಗೊಂಡು ರಾಮಮೂರ್ತಿ ನಗರ ಠಾಣೆಗೆ ಬಂದು ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಕಲ್ಕರೆ ಕೆರೆಯಲ್ಲಿ ಮಹಿಳೆಯ ಬಾಡಿ ಬಿದ್ದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಕೂಡಲೇ ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಮಹಿಳೆಯನ್ನ ಅತ್ಯಾಚಾರ ಮಾಡಿ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸೋಕೊ ತಂಡ ಹಾಗೂ ಡಾಗ್ ಸ್ಕ್ವಾಡ್ ಕರೆತಂದು ಪರಿಶೀಲನೆ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಘಟನೆ ಸಂಬಂಧ ಮಹಿಳೆಯ ಗಂಡ ಸುಮನ್ ಕೊಟ್ಟ ದೂರಿನ ಆಧಾರದ ಮೇಲೆ ಅತ್ಯಾಚಾರ ಮತ್ತು ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ‌.

Share This Article