ಮುಂದಿನ ಪ್ರಧಾನಿ ಆಗುವ ಯೋಗ ಒಬ್ಬ ಮಹಿಳೆಗೆ ಇದೆ: ಕಾಲಜ್ಞಾನಿ ಯಶ್ವಂತ ಗುರೂಜಿ ಭವಿಷ್ಯ

Public TV
1 Min Read

ತುಮಕೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ಕಾಲಜ್ಞಾನ ಭವಿಷ್ಯವೊಂದು ಹೊರಬಿದ್ದಿದೆ. ಮುಂದಿನ ಪ್ರಧಾನಿಯಾಗುವ ಯೋಗ ಒಬ್ಬ ಮಹಿಳೆಗೆ ಇದೆ ಎಂದು ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.

ತುಮಕೂರಿನ ನೊಣವಿನಕೆರೆಯಲ್ಲಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ ಅಂತ ಗುರೂಜಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ನಿಜ ಆಯ್ತು. ಇದೀಗ ರಾಷ್ಟ್ರ ರಾಜಕಾರಣದ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಯುವತಿ ಮದ್ವೆಗೆ ಒಪ್ಪಿಲ್ಲ ಅಂತ 850 ಅಡಿಕೆ ಗಿಡ ನಾಶ ಮಾಡಿದ ಕಿರಾತಕ

ಇಂದಿರಾಗಾಂಧಿ ನಂತರ ರಾಷ್ಟ್ರ ರಾಜಕಾರಣದ ಚುಕ್ಕಾಣಿಯನ್ನ ಮಹಿಳೆಯೇ ಹಿಡಿಯಲಿದ್ದಾರೆ. ಮಹಾಶಿವರಾತ್ರಿ ಹಬ್ಬದ ನಂತರ ಒಂದು ಶಕ್ತಿ ಅಂದರೆ, ಒಂದು ಸ್ತ್ರೀ ದೇಶವನ್ನ ಆಳ್ತಾರೆ. ಹಾಗಂತ ಕಾಲಜ್ಞಾನದ ಭವಿಷ್ಯವಾಣಿ ಭವಿಷ್ಯವನ್ನ ಹೇಳ್ತಿದೆ ಎಂದು ತಿಳಿಸಿದ್ದಾರೆ.

35 ವರ್ಷಗಳ ಹಿಂದಿನ ದಿನಮಾನಗಳಲ್ಲಿ ಒಂದು ಸ್ತ್ರೀ ದೇಶವನ್ನ ಆಳಿದ್ದಾರೆ. ಈಗ ಮಹಾಶಿವರಾತ್ರಿ ನಂತರ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಈ ದೇಶವನ್ನ ಒಂದು ಶಕ್ತಿ ಅಂದರೆ, ಒಂದು ಸ್ತ್ರೀ ಮಹಾಶಿವರಾತ್ರಿ ನಂತರ ದೇಶ ಆಳ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸುವರ್ಣ ಮಹೋತ್ಸವ – ಸಾಹಿತಿಗಳ ಸಲಹೆ ಪಡೆದ ಶಿವರಾಜ್ ತಂಗಡಗಿ

ಕಾಲಜ್ಞಾನ ಭವಿಷ್ಯದ ಪ್ರಕಾರ ಒಂದು ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಅತಂತ್ರ ಪರಿಸ್ಥಿತಿ ಆಗುತ್ತದೆ. ಮಿತ್ರ ಪಕ್ಷಗಳ ಸಹಾಯದಿಂದ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ. ಪ್ರಧಾನಿ ಯೋಗವಿರುವ ಸ್ತ್ರೀ ಯಾರೆಂದು ಮಕರ ಸಂಕ್ರಮಣದ ಹಬ್ಬದಂದು ಹೇಳಲಾಗುತ್ತದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್