ಅಪ್ರಾಪ್ತೆ ಎಂದು ಬುದ್ಧಿಮಾತು – ವಿಷ ಸೇವಿಸಿ ರೈಲ್ವೇ ಹಳಿ ಮೇಲೆ ಮಲಗಿದ ಪ್ರೇಮಿಗಳು

Public TV
1 Min Read

– ಯುವಕ ಸಾವು, ಅಪ್ರಾಪ್ತೆಗೆ ಮುಂದುವರೆದ ಚಿಕಿತ್ಸೆ

ಹಾಸನ: ಮದುವೆಗೆ ಪೋಷಕರು ವಿರೋಧಿಸಿದ್ದಕ್ಕೆ ಹೊಳೆನರಸೀಪುರದಲ್ಲಿ (Holenarasipur) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಲ್ಲಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವಿಗೀಡಾಗಿದ್ದಾನೆ.

ಮೃತ ಯುವಕನನ್ನು ನಗರನಹಳ್ಳಿ ಗ್ರಾಮದ ರಾಜು (24) ಎಂದು ಗುರುತಿಸಲಾಗಿದೆ. ಮೃತ ಯುವಕ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಅಪ್ರಾಪ್ತೆ ಎನ್ನುವ ಕಾರಣಕ್ಕೆ ಮದುವೆಗೆ ನಿರಾಕರಿಸಿ ಪೋಷಕರು, ಬುದ್ಧಿವಾದ ಹೇಳಿದ್ದರು. ಇದರಿಂದ ನೊಂದ ಪ್ರೇಮಿಗಳು (Lovers) ವಿಷ ಸೇವಿಸಿ, ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿಯ ರೈಲ್ವೇ ಹಳಿ ಮೇಲೆ ಮಲಗಿದ್ದರು. ಹಳಿ ಮೇಲೆ ಒದ್ದಾಡುತ್ತಿದ್ದ ಇಬ್ಬರನ್ನು ನೋಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಇದನ್ನೂ ಓದಿ: ತಲೆನೋವಿನಿಂದ ಬೇಸತ್ತು 7 ತಿಂಗಳ ಗರ್ಭಿಣಿ ಆತ್ಮಹತ್ಯೆ

ಸ್ಥಳಕ್ಕೆ ಬಂದ ಪೊಲೀಸರು ಜೀಪ್‍ನಲ್ಲೇ ಇಬ್ಬರನ್ನು ನಗರದ ಆಸ್ಪತ್ರೆಗೆ ಕರೆತಂದು, ಚಿಕಿತ್ಸೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಯುವಕ ಮೃತಪಟ್ಟಿದ್ದು, ಅಪ್ರಾಪ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ಯುವಕ ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ- ಆರೋಪಿಗಳ ಬಂಧನಕ್ಕೆ ಒತ್ತಾಯ

Share This Article