ಚಿಕ್ಕಮಗಳೂರು: ಕಾಫಿನಾಡಿನ ಸೌಂದರ್ಯ ಸವಿಯಲು ಪ್ರವಾಸಕ್ಕೆಂದು ಬಂದಿದ್ದ 30 ವರ್ಷದ ಯುವಕ ತೀವ್ರ ಹೃದಯಾಘಾತದಿಂದ (Heart Attack ) ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತನನ್ನ ಬೆಂಗಳೂರು (Bengaluru) ಮೂಲದ ರಾಹುಲ್ ಎಂದು ಗುರುತಿಸಲಾಗಿದೆ. ಮೃತ ಯುವಕ ಸ್ನೇಹಿತರ ಜೊತೆ ಕಳೆದ ಎರಡು ದಿನದ ಹಿಂದೆಯೇ ಚಿಕ್ಕಮಗಳೂರು ಹೊರಹೊಲಯದ ನಲ್ಲೂರು ಗ್ರಾಮದ ಹೋಂ ಸ್ಟೇಗೆ ಬಂದು ತಂಗಿದ್ದನು. ಇಂದು (ಭಾನುವಾರ) ಮಧ್ಯಾಹ್ನವಾದರೂ ಬಾಗಿಲು ತೆರೆಯದ ಹಿನ್ನೆಲೆ ಹೋಂ ಸ್ಟೇ ಮಾಲೀಕರು ಹಾಗೂ ಸ್ನೇಹಿತರು ಬಾಗಿಲು ತೆಗೆದು ನೋಡಿದಾಗ ಪ್ರಜ್ಞೆ ಇಲ್ಲದೆ ಬಿದ್ದಿದ್ದ. ಎಲ್ಲರೂ ಆತನನ್ನ ಎಬ್ಬಿಸುವ ಪ್ರಯತ್ನ ಮಾಡಿ ಎಚ್ಚರಿಸಿ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ತೀವ್ರ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಿಕ್ಕಮಗಳೂರು | ಮೆಡಿಕಲ್‍ನಲ್ಲಿ ಮಾತ್ರೆ ಪಡೆದು ಸೇವಿಸುವಾಗಲೇ ಹೃದಯಾಘಾತ – ವ್ಯಕ್ತಿ ಸಾವು
ಮೃತ ಯುವಕನಿಗೆ ಮೂರ್ಛೆ ರೋಗ ಇತ್ತೆಂದು ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಹೃದಯಾಘಾತಕ್ಕೆ ಬಲಿ
ಮತ್ತೊಂದು ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಕರ್ತಿಕೆರೆ ಗ್ರಾಮದ ದ್ರಾಕ್ಷಾಯಿಣಿ (48) ಎಂಬ ಮಹಿಳೆ ಕೂಡ ವಾಶ್ ರೂಮ್‌ಗೆ ಹೋಗುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಕಳೆದ 15 ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಕಾರಲ್ಲಿ ದನ ಕದ್ದೊಯ್ತಿದ್ದಾಗ ದಾಳಿ – ಪೊಲೀಸ್ರ ಮೇಲೆ ರಾಡ್ ಬೀಸಿದ ದನಗಳ್ಳರು