ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ (Youth) ಮೃತಪಟ್ಟ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಜರುಗಿದೆ.
ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ (21) ಮೃತಪಟ್ಟ ಯುವಕ. ಇದನ್ನೂ ಓದಿ: ಉದ್ಯಮಿ ರಘುನಾಥ್ ಹತ್ಯೆ ಕೇಸ್ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್
ಪ್ರಹ್ಲಾದ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದ. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

