ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ

Public TV
1 Min Read

– ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆದು ಕೃತ್ಯ

ಬೆಂಗಳೂರು: ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾದ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆನಗರ ಜನತಾ ಕಾಲೋನಿಯಲ್ಲಿ ನಡೆದಿದೆ.

ವಿಜಯ್(26) ಕೊಲೆಯಾದ ಯುವಕ. ವಿಜಯ್ ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಜೈಲಿನಿಂದ ಹೊರಬಂದಿದ್ದ ವಿಜಯ್‌ನನ್ನು ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆಸಿ ದುಷ್ಕರ್ಮಿಗಳು ಶನಿವಾರ ರಾತ್ರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

ಜೆಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share This Article