ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದ ಯುವಕ!

Public TV
1 Min Read

– ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಅಪ್ಲೋಡ್

ಮಂಗಳೂರು: ಬಿಗ್ ಬಾಸ್ ಸೀಸನ್ 10 (Big Boss) ರಲ್ಲಿ ಡ್ರೋಣ್ ಪ್ರತಾಪ್ (Drone Pratap) ಸೋತಿದ್ದಕ್ಕೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬದ ಯುವಕನೋರ್ವ (Youth) ಅರ್ಧ ಗಡ್ಡ, ಮೀಸೆ ತೆಗೆದು ತನ್ನ ಚಾಲೆಂಜ್ ಪೂರೈಸಿದ್ದಾನೆ.

ಭಾನುವಾರಂದು ನಡೆದ ಕನ್ನಡ ಬಿಗ್ ಬಾಸ್ ಸೀಸನ್ 10 ಗ್ರಾಂಡ್ ಫಿನಾಲೆಯಲ್ಲಿ ವಿಜೇತರಾಗಿ ಕಾರ್ತಿಕ್ ಮಹೇಶ್ ಹೊರಹಮ್ಮಿದ್ದಾರೆ. ಈ ಸಂದರ್ಭದಲ್ಲಿ ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಎಂಬಾತ ಡ್ರೋಣ್ ಪ್ರತಾಪ್‌ಗಾಗಿ ಅರ್ಥ ಗಡ್ಡ ಹಾಗೂ ಮೀಸೆ ತೆಗೆದಿದ್ದಾನೆ. ಇದನ್ನೂ ಓದಿ:  ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ

ಝೈನುಲ್ ಈ ಬಾರಿ ಬಿಗ್‌ಬಾಸ್ ಸೀಸನ್‌ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರುತ್ತಾರೆ ಎಂದು ಹೇಳಿದ್ದರು. ಒಂದು ವೇಳೆ ಪ್ರತಾಪ್ ಸೋತರೆ ತನ್ನ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿ ಪೋಸ್ಟ್ ಮಾಡಿದ್ದನು. ಜೊತೆಗೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೊಂದು ವೀಡಿಯೋವನ್ನು ಸಹ ಹರಿಬಿಟ್ಟಿದ್ದನು. ಇದನ್ನೂ ಓದಿ: ED  ಕೈಗೆ ಸಿಗದ ಜಾರ್ಖಂಡ್ ಸಿಎಂ – ಹೇಮಂತ್ ಸೊರೆನ್  BMW ಕಾರು  ವಶಕ್ಕೆ

ಇದೀಗ ಕಾರ್ತಿಕ್ ವಿನ್ನರ್ ಆಗಿ ಹೊರಬಂದಿದ್ದು, ಪ್ರತಾಪ್ ರನ್ನರ್ ಅಪ್ ಆಗಿರೋದು ಝೈನುಲ್‌ಗೆ ಅಸಮಾಧಾನ ತಂದು ಕೊಟ್ಟಿದೆ. ಫಲಿತಾಂಶ ಹೊರ ಬರುತ್ತಿದ್ದಂತೆ ಸವಾಲಿನಂತೆ ಆಬಿದ್ ಅರ್ಧ ಗಡ್ಡ ಮತ್ತು ಮೀಸೆಯನ್ನ ಬೋಳಿಸಿಕೊಂಡಿದ್ದಾನೆ. ಜೊತೆಗೆ ಹಸಿ ಮೆಣಸಿನಕಾಯಿಯನ್ನು ಸಹ ತಿಂದು ವೀಡಿಯೋ ಮಾಡಿ ಅಪ್ಲೋಡ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದೀಗ ಝೈನುಲ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ಅವಹೇಳನ; ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣಕ್ಕೆ ಕೋರ್ಟ್‌ ಮಧ್ಯಂತರ ತಡೆ

Share This Article