ಈಜಲು ತೆರಳಿದ್ದ ಯುವಕ ಸುಳಿಗೆ ಸಿಲುಕಿ ಸಾವು – ಎರಡು ದಿನವಾದ್ರೂ ಪತ್ತೆಯಾಗದ ಮೃತದೇಹ

By
0 Min Read

ಚಿಕ್ಕಮಗಳೂರು: ಈಜಲು ಹೋಗಿದ್ದಾಗ ಸುಳಿಗೆ ಸಿಕ್ಕಿ ಯುವಕ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ (N R Pura) ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.

ಮೃತನನ್ನು ಜಲಾಲ್ (25) ಎಂದು ಗುರುತಿಸಲಾಗಿದೆ. ಭಾನುವಾರ (ಫೆ.16) ಭದ್ರಾ ನದಿಯಲ್ಲಿ (Bhadra River) ಮೂವರು ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಈ ಘಟನೆ ನಡೆದಿದೆ. ಜಲಾಲ್ ಸುಳಿಗೆ ಸಿಲುಕಿದ್ದರಿಂದ ಉಳಿದವರಿಗೆ ರಕ್ಷಿಸಲು ಸಾಧ್ಯವಾಗಿಲ್ಲ.

ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದರು. ಆದರೂ ಶವ ಪತ್ತೆಯಾಗಿರಲಿಲ್ಲ. ಇಂದು (ಫೆ.17) ಮುಳುಗು ತಜ್ಞರು, ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share This Article