Haveri | ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

Public TV
1 Min Read

ಹಾವೇರಿ: ನದಿಗೆ ಈಜಲು ತೆರಳಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ (Haveri) ತಾಲೂಕಿನ ಕರ್ಜಗಿ (Karjagi) ಗ್ರಾಮದ ಬಳಿಯ ವರದಾ ನದಿಯಲ್ಲಿ  (Varada River) ನಡೆದಿದೆ.

ಮೃತ ಯುವಕನನ್ನು ಕಾರ್ತಿಕ್ (18) ಎಂದು ಗುರುತಿಸಲಾಗಿದೆ. ವರದಾ ನದಿಗೆ ಈಜಲು ತೆರಳಿದ್ದ ವೇಳೆ ನದಿಯಲ್ಲಿದ್ದ ಮುಳ್ಳುಕಂಟೆಗೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜು ತಜ್ಞ ಸಿದ್ದು ಚರಂತಿಮಠ ನಿರಂತರವಾಗಿ ಹನ್ನೆರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್

ಬುಧವಾರ ಮಧ್ಯಾಹ್ನ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿರಂತರ ಕಾರ್ಯಾಚರಣೆ ನಡೆಸಿ ಗುರುವಾರ ಸಂಜೆ ಯುವಕನ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ದಾಖಲಿಸಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

Share This Article