ಕೊಪ್ಪಳ: ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳದ ಬಹದ್ದೂರ ಬಂಡಿ ರಸ್ತೆಯಲ್ಲಿ ನಡೆದಿದೆ.
ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕ. ಬಹದ್ದೂರ್ ಬಂಡಿ ರಸ್ತೆಯ ಮೂರನೇ ವಾರ್ಡ್‌ನ ನಡುರಸ್ತೆಯಲ್ಲಿ ಕೊಲೆಯಾಗಿದೆ.
ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ಸಹೋದರನಿಂದ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೂರು ಜನರ ಗುಂಪಿನಿಂದ ಯುವಕನ ಕೊಚ್ಚಿ ಕೊಲೆ ಮಾಡಲಾಗಿದೆ.
ಸ್ಥಳದಲ್ಲಿ ಎರಡು ಮಚ್ಚುಗಳು ಪತ್ತೆಯಾಗಿವೆ. ಓರ್ವ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.