ಜಲಪಾತ ವೀಕ್ಷಿಸುವಾಗ ಆಯತಪ್ಪಿ ಬಿದ್ದಿದ್ದ ಯುವಕ – ಮೃತದೇಹವಾಗಿ ಒಂದು ವಾರದ ಬಳಿಕ ಪತ್ತೆ

By
1 Min Read

ಉಡುಪಿ: ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಿದ್ದು ನಾಪತ್ತೆಯಾಗಿದ್ದ ಭದ್ರಾವತಿಯ ಯುವಕ ಒಂದು ವಾರದ ಬಳಿಕ ಮೃತದೇಹವಾಗಿ ಪತ್ತೆಯಾಗಿದ್ದಾನೆ.

ಭದ್ರಾವತಿಯ ಶರತ್ ಕುಮಾರ್ (23) ಮೃತದೇಹ ಪತ್ತೆಯಾಗಿದೆ. ಈತ ವಾರದ ಹಿಂದೆ ಕೊಲ್ಲೂರಿನ ಅರಶಿನಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ. ಶರತ್ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಇದನ್ನೂ ಓದಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ

ಬಂಡೆ ಕಲ್ಲಿನ ಒಳಗಡೆ ಸಿಲುಕಿ ಮೃತದೇಹ ಸಿಲುಕಿಕೊಂಡಿತ್ತು. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರ ಕಾರ್ಯಾಚರಣೆಯಿಂದ ಮೃತದೇಹ ಪತ್ತೆಯಾಗಿದೆ. ಜುಲೈ 23ರಂದು ಶರತ್ ಕಾಲು ಜಾರಿ ನಾಪತ್ತೆಯಾಗಿದ್ದ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬAಧ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್