ಮಾಸ್ಕ್‌ ಧರಿಸಿ ಎಂದಿದ್ದಕ್ಕೆ ಪೊಲೀಸರನ್ನೇ ಥಳಿಸಿದ ಪುಂಡರು!

Public TV
1 Min Read

ಬೆಂಗಳೂರು: ಮಾಸ್ಕ್‌ ಧರಿಸಿ ಎಂದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ನಗರದ ಯಲಹಂಕ ನ್ಯೂ ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕ ಸಮೀಪದ ಚಿಕ್ಕಬೆಟ್ಟಹಳ್ಳಿ ಬಳಿ ಕರ್ತವ್ಯನಿರತ ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ. ಚಿಕ್ಕಬೆಟ್ಟಹಳ್ಳಿ ಬಳಿ ಪೊಲೀಸರು ವಾಹನ ತಪಾಸಣೆ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕೆಲವರು ಮಾಸ್ಕ್‌ ಧರಿಸದೇ ಓಡಾಡುತ್ತಿದ್ದರು. ಮಾಸ್ಕ್‌ ಧರಿಸಿ ಎಂದು ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ ಪೊಲೀಸ್ – ಡಿಕ್ಕಿ ಹೊಡೆದು ಇಬ್ಬರಿಗೆ ಗಾಯ

ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಕರ್ನಾಟಕದ ಮೂಲಕ ಭಾರತಕ್ಕೆ ಕಾಲಿಟ್ಟಿದೆ. ಈವರೆಗೂ ಭಾರತದಲ್ಲಿ 23 ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ. ಕರ್ನಾಟಕದಲ್ಲಿ ಓಮಿಕ್ರಾನ್‌ ಸೋಂಕಿತ ಎರಡು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕಾಣೆಯಾಗಿದ್ದ PDO ಮೃತದೇಹ ನೆರೆಯ ತೆಲಂಗಾಣದಲ್ಲಿ ಪತ್ತೆ

ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಹೊರಗಡೆ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಕೋವಿಡ್‌ಗೆ ಸಂಬಂಧಿಸಿದ ಅಗತ್ಯ ಮುಂಜಾಗ್ರತೆ ಕ್ರಮಕೈಗೊಳ್ಳುವಂತೆ ಸೂಚಿಸಿದೆ. ಇಲ್ಲದಿದ್ದರೆ ಸೂಕ್ತ ಕಾನೂನು ಕ್ರಮಕೈಗೊಳ್ಳುವುದರ ಜೊತೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *